ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿ ಮತ್ತೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗ್ತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್​ ವರಿಷ್ಠ ಎಚ್​.ಡಿ .ದೇವೇಗೌಡರು ಅವರು ಇಂದು ತಮ್ಮ ಬೆಂಗಳೂರಿನ ನಿವಾಸದಲ್ಲಿ ಮಂಡ್ಯ ಜಿಲ್ಲಾ ಜೆಡಿಎಸ್​ ನಾಯಕರ ಸಭೆ ನಡೆಸಿದ್ರು. ಅಭ್ಯರ್ಥಿ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ರು. ಅಲ್ಲದೇ ಯಾರು ಅಭ್ಯರ್ಥಿಯಾದರೆ ಹೇಗೆ ಎನ್ನುವ ಸಾಧಕ-ಬಾಧಕಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು. ಬಳಿಕ ಮಾತನಾಡಿದ ದೇವೇಗೌರು, ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಕುಮಾರಸ್ವಾಮಿ, ನನಗೆ, ನಿಖಿಲ್​ಗೆ ಒತ್ತಾಯವಿದೆ. ಆದ್ರೆ, ನಾನು ಸ್ಪರ್ಧಿಸಲ್ಲ ಎಂದು ಹೇಳಿದ್ದೇನೆ.

ಈಗಾಗಲೇ ನಿಖಿಲ್ ಸಹ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ ಎಂದು ದೇವೇಗೌಡರು ಸ್ಪಷ್ಟಪಡಿಸಿದರು. ನಿಖಿಲ್ ಕುಮಾರಸ್ವಾಮಿ ರಾಜ್ಯಾದ್ಯಂತ ಓಡಾಡಿ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಕಾರ್ಯಕರ್ತರೊಂದಿಗೆ ಸಭೆ ಮಾಡಿ ಮಾತಾಡಿದ್ದಾರೆ. ಈ ಸಭೆಯಲ್ಲಿ ನಾವು ಮೂವರಲ್ಲಿ ಒಬ್ಬರು  ನಿಲ್ಲಿ ಅಂದಿದ್ದಾರೆ. ಆದ್ರೆ, ನಾನು ನಿಲ್ಲಲ್ಲ. ನಿಖಿಲ್ ಕೂಡ ನಿಲ್ಲಲ್ಲ. ಕುಮಾರಸ್ವಾಮಿ ಅವರು ಇವತ್ತು ಸಭೆಯಲ್ಲಿ ಇರಲಿಲ್ಲ. ಅಂತಿಮವಾಗಿ ಲೋಕಸಭೆ ಬಗ್ಗೆ ನಾವು ಒಂದು ಅಭಿಪ್ರಾಯ ತಗೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಎಂಟು ಕ್ಷೇತ್ರದಲ್ಲೂಓಡಾಟ ನಡೆಸುತ್ತೇವೆ. ಇಲ್ಲಿ ಜೆಡಿಎಸ್- ಬಿಜೆಪಿ ಪ್ರಶ್ನೆ ಅಲ್ಲ. ಎನ್​ಡಿಎದಲ್ಲಿ ನಾವು  ಇದ್ದೇವೆ. ಅಂತಿಮವಾಗಿ ಮೋದಿ, ನಡ್ಡಾ, ಕುಮಾರಸ್ವಾಮಿ, ಯಡಿಯೂರಪ್ಪ ಎಲ್ಲರೂ ಸಮಾಲೋಚನೆ ಮಾಡಿ ತೀರ್ಮಾನ ಮಾಡುತ್ತಾರೆ. ರೇವಣ್ಣ ಎಂದು ಲೋಕಸಭೆಗೆ ಹೋಗುತ್ತೇನೆ ಎಂದು ಹೇಳಿಲ್ಲ. ಇದು ಮಾಧ್ಯಮದವರ ಸೃಷ್ಟಿ. ನಾವು ಮೂರು ಜನ ಒಗ್ಗಟ್ಟಾಗಿ ಹೋಗುತ್ತೇವೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ರು.

By admin

Leave a Reply

Your email address will not be published. Required fields are marked *

Verified by MonsterInsights