ಮಂಡ್ಯ: ವಯನಾಡಿನಲ್ಲಿ ಗುಡ್ಡ ಕುಸಿತ ದುರಂತದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಲೀಲಾವತಿ ಹಾಗೂ ನಿಹಾಲ್ ಮೃತಪಟ್ಟಿದರು. ಇಂದು ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸಿ.ಬಿ. ಸುರೇಶ್ ಬಾಬು ಅವರು ಹಾಗೂ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಕೆ.ಆರ್. ಪೇಟೆ ಶಾಸಕರಾದ ಶ್ರೀ. ಮಂಜುನಾಥ್ ಅವರು ಸೇರಿದಂತೆ ಸ್ಥಳೀಯ ಮುಖಂಡರು ಜೊತೆಯಲ್ಲಿದ್ದರು.