Wednesday, April 30, 2025
30.3 C
Bengaluru
LIVE
ಮನೆ#Exclusive NewsTop Newsಚನ್ನಪಟ್ಟಣ ಟಿಕೆಟ್ ಹೈಕಮಾಂಡ್ ತೀರ್ಮಾನ ಮಾಡುತ್ತೆ-ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ಟಿಕೆಟ್ ಹೈಕಮಾಂಡ್ ತೀರ್ಮಾನ ಮಾಡುತ್ತೆ-ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಚಾರ ಅಂತಿಮವಾಗಿ ದೆಹಲಿಯ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಈಗಾಗಲೇ ವರದಿ ಸಹ ದೆಹಲಿಯ ಬಿಜೆಪಿ ಹೈಕಮಾಂಡ್ ಸೇರಿದೆ. ಕೆಲವೇ ದಿನಗಳಲ್ಲಿ NDA ಅಭ್ಯರ್ಥಿಯನ್ನ ಘೋಷಣೆ ಮಾಡುತ್ತಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಜೆಪಿ ಭವನ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರ ಸ್ವ ಕ್ಷೇತ್ರ
ಕಳೆದ ಎರಡು ಬಾರಿ ಜನ ಶಾಸಕರಾಗಿ ಆಶೀರ್ವಾದ ಮಾಡಿ ಗೆಲ್ಲಿಸಿದ್ದಾರೆ. ಹಾಗಾಗಿ ಪಕ್ಷದ ಧ್ವನಿಯಾಗಿ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುವುದು ನನ್ನ ಜವಾಬ್ದಾರಿ. ಅತೀ ಶೀಘ್ರದಲ್ಲೇ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಉಪಚುನಾವಣೆ ಪ್ರಕಟವಾಗುತ್ತೆ. ಆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು,ಮುಖಂಡರಿಗೆ ಜವಾಬ್ದಾರಿ ಕೊಟ್ಟು ಕೆಲಸ ಮಾಡಬೇಕು.ಅಲ್ಲಿನ ಕಾರ್ಯಕರ್ತರ ಬಯಕೆ ಆ ನಿಟ್ಟಿನಲ್ಲಿ ನಾನು ಕೆಲಸ ಮಾಡ್ತಾ ಇದ್ದೇನೆ ಅದು ನನ್ನ ಕರ್ತವ್ಯ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ಚನ್ನಪಟ್ಟಣ ಜೆಡಿಎಸ್‌ನ ಭದ್ರಕೋಟೆ

ಚನ್ನಪಟ್ಟಣ ಕ್ಷೇತ್ರ ಟಿಕೆಟ್ ಗೊಂದಲ, ಕಾಂಗ್ರೆಸ್‌ಗೆ ಲಾಭ ಆಗುತ್ತಾ ಎಂಬ ವಿಚಾರದ ಕುರಿತು ಮಾತನಾಡಿದ ಅವರು, ಚನ್ನಪಟ್ಟಣ ತಾಲ್ಲೂಕು ಜೆಡಿಎಸ್ ಪಕ್ಷದ ಭದ್ರಕೋಟೆ. ವರದೇಗೌಡರು ಇವತ್ತು ನಮ್ಮ ಜೊತೆಯಲಿಲ್ಲ. ಆದ್ರೆ ಅವರು ಪಕ್ಷದಲ್ಲಿ ಇದ್ದಂತಹ ಸಂದರ್ಭದಲ್ಲಿ ಪಕ್ಷಕ್ಕೆ ಜನ ಆಶೀರ್ವಾದ ಮಾಡಿದ್ದಾರೆ. ಜೊತೆಯಲ್ಲಿ ನಾಗರಾಜಣ್ಣ ನಮನ್ನ ಅಗಲಿದ್ದಾರೆ.
ಸರಳ ವ್ಯಕ್ತಿಗೆ ಬೆಂಬಲ ನೀಡಿ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ಸಾಮಾನ್ಯರಲ್ಲಿ ಸಾಮಾನ್ಯ ಕಾರ್ಯಕರ್ತ ಸ್ಪರ್ಧೆ ಮಾಡಿದರೂ 55ರಿಂದ 6೦ ಸಾವಿರ ಜೆಡಿಎಸ್ ಮತಗಳಿವೆ. ಆಗಿದ್ದಾಗ ಒಂದು ಕಡೆ ಜೆಡಿಎಸ್ ಶಕ್ತಿ ಮತ್ತೊಂದು ಕಡೆ ಸಿ.ಪಿ ಯೋಗಿಶ್ವರ್ ಅವರು ಸಹ ವೈಯಕ್ತಿಕ ವರ್ಚಸ್ಸು ಕ್ಷೇತ್ರದಲ್ಲಿ ಇಟ್ಟುಕೊಂಡಿದ್ದಾರೆ. ಇವೆಲ್ಲವನ್ನ ನೋಡಿದಾಗ ಕಾಂಗ್ರೆಸ್‌ಗೆ ಚನ್ನಪಟ್ಟಣ ಕ್ಷೇತ್ರದಲ್ಲಿ ನೆಲೆ ಇಲ್ಲ. ಇತಿಹಾಸ ತೆಗೆದು ನೋಡಿದಾಗ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪ್ರಭಾವವಿಲ್ಲ ಎಂದು ಹಿಂದಿನ ಮಾಹಿತಿ ನೋಡಿದಾಗ ತಿಳಿಯುತ್ತೆ ಎಂದರು.

ಮೈಸೂರು ಪ್ರಾಂತ್ಯ ಅಷ್ಟೇ ಅಲ್ಲ,ಉತ್ತರ ಕರ್ನಾಟಕದ ಭಾಗದಲ್ಲಿ ನಮ್ಮ ಶಕ್ತಿ ಇದೆ

ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷಸ್‌ಗೆ ಅನುಮತಿ ಕೋರಿ ಲೋಕಾಯುಕ್ತ ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯೆಸಿದ ಅವರು, ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಅವರ ನಾಯಕತ್ವದ ಶಕ್ತಿ ಹಳೆ ಮೈಸೂರು ಪ್ರಾಂತ್ಯ ಅಲ್ಲ. ಉತ್ತರ ಕರ್ನಾಟಕದಲ್ಲಿಯೂ ಬಿಜೆಪಿ ಜೆಡಿಎಸ್ ಕಾರ್ಯಕರ್ತ ಹೊಂದಾಣಿಕೆಯಿಂದ ದುಡಿದಿದ್ದಾರೆ. ಇವೆಲ್ಲಾ ಗಮನದಲ್ಲಿ ಇಟ್ಟುಕೊಂಡು ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗಿದ್ರು. ಅಲ್ಲಿ ಮುಖ್ಯವಾದ ಚರ್ಚೆ ಕುಮಾರಸ್ವಾಮಿ ಅವರನ್ನ ಯಾವ ರೀತಿ ಕಟ್ಟಿ ಹಾಕಬೇಕು ಅಂತ ಚರ್ಚೆ ಆಗಿದೆ ಅನ್ನುವುದು ನಮ್ಮ ಅಭಿಪ್ರಾಯ ಎಂದರು.

ಮೂಡಾ ಕೇಸ್ ಮುಚ್ಚಿಹಾಕಲು ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳ್ತಾರೆ

ಗಣಿಗಾರಿಕೆ ಪ್ರಕರಣ ಸುಪ್ರೀಂಕೋರ್ಟ್ ಅಂಗಳಕ್ಕೆ ಹೋಗಿ 7 ವರ್ಷಗಿದೆ. ಸುಪ್ರೀಂ ಕೋರ್ಟ್ ಡೇರೆಕ್ಷನ್ ಕೊಟ್ಟಿದೆ. ಲೋಕಾಯುಕ್ತ ಮತ್ತು SITಗೆ ಮೂರು ತಿಂಗಳ ಗಡುವಿನಲ್ಲಿ ಏನಂದ್ರು ವರದಿಯನ್ನ ಕೊಡಿ ಅಂತ ಕೇಳಿತ್ತು.ಅದರೆ ಯಾವುದೇ ರೀತಿಯ ವರದಿಗಳು ಬಂದಿಲ್ಲ ಎಂದರು.

ಕಾಂಗ್ರೆಸ್ ನಾಯಕರಿಗೆ ಪರಿಜ್ಞಾನ ಇರಲಿಲ್ವಾ?

ಇನ್ನು ಕಾಂಗ್ರೆಸ್ ನಾಯಕರನ್ನ ಪ್ರಶ್ನಿಸಿದ ಅವರು ಇಷ್ಟೆಲ್ಲಾ ಕುಮಾರಣ್ಣ ಬಗ್ಗೆ ಆರೋಪ ಮಾಡುತಿರಲ್ಲ 2018ರಲ್ಲಿ ಕುಮಾರಸ್ವಾಮಿ ಅವರನ್ನ ಸಿಎಂ ಮಾಡೋಕೆ ಬಂದ್ರು ಆಗ ಇವರಿಗೆ ಮಾಹಿತಿ ಇರಲಿಲ್ಲಾ? ಈಗ ಯಾಕೆ ಇದನ್ನ ಪ್ರಶ್ನೆ ಮಾಡ್ತಾ ಇದ್ದಾರೆ. ಅವತ್ತು ಅವರಿಗೆ ಪರಿಜ್ಞಾನ ಇರಲಿಲ್ವಾ? ಇಗ್ಯಾಕೆ ಹೊಸದಾಗಿ ಚರ್ಚೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.

ಮೂಡ ಹಗರಣ ಮುಚ್ಚಿಹಾಕಲು ಕಾಂಗ್ರೆಸ್ ಹೊಸ ಪ್ಲಾನ್

ಕುಮಾರಸ್ವಾಮಿಯವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರೋದು ಜನರನ್ನ ದಿಕ್ಕು ತಪ್ಪಿಸುವ ಕೆಲಸ ಅಷ್ಟೇ. ಇದರಿಂದ ಕುಮಾರಸ್ವಾಮಿರನ್ನ ಸಚಿವ ಸ್ಥಾನದಿಂದ ಇಳಿಸೋಕೆ ಸಾಧ್ಯವಿಲ್ಲ ನಾವು ಆತ್ಮವಿಶ್ವಸದಿಂದ ಹೇಳುತ್ತಿದ್ದೇವೆ, ಕುಮಾರಣ್ಣನವರು ಗಣಿಗಾರಿಕೆಗೆ ಸಹಿ ಹಾಕಿಲ್ಲ. ಮುಡಾ ಹಗರಣವನ್ನು ಮುಚ್ಚಿಹಾಕಲು ಕಾಂಗ್ರೆಸ್ ಪ್ಲಾನ್ ಅಷ್ಟೇ ಎಂದು ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.

ಸಿಎಂ ಪತ್ನಿ ಬರೆದ ಪತ್ರದಲ್ಲಿ ವೈಟ್ನರ್ ಬಳಸಿದ್ಯಾಕೆ.?

ಸಿಎಂ ಪತ್ನಿ ವಿಜಯನಗರದಲ್ಲಿ ಸೈಟ್ ಪತ್ರ ಬಿಡುಗಡೆ ವಿಚಾರಕ್ಕೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು ನಿಮ್ಮ ಕಣ್ಣ್ಮುಂದೆ ಇದೆ. ಆ ಪತ್ರದಲ್ಲಿ ಏನ್ ಬರೆದಿದ್ದಾರೆ? 40:90 ನಿವೇಶನ ನಮಗೆ ಬೇಡ ಇಂತಹ ಜಾಗ ಬೇಕು ಅಂತ ವೈಟ್ನರ್ ಹಾಕಿ ಅಳಿಸಿ ಹಾಕಿದ್ದಾರೆ. ಅದರಲ್ಲಿ ಏನು ಬರೆದಿದ್ರು? ಎಲ್ಲಿ ಕೇಳಿದ್ರು ಬದಲಿ ಜಾಗವನ್ನ? ಇದೇ ವಿಜಯನಗರ ಬಡಾವಣೆ ಬರೆದಿದ್ರು ಎಂದು ಸಿಎಂ ಸಿದ್ದರಾಮಯ್ಯಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments