Thursday, November 20, 2025
19.9 C
Bengaluru
Google search engine
LIVE
ಮನೆ#Exclusive Newsಆಸ್ಟ್ರೇಲಿಯಾಗೆ ಬೆಂಡೆತ್ತಿದ ನಿತೀಶ್​ ಕುಮಾರ್.. ಪುಷ್ಪ ಸ್ಟೈಲ್ ಮಾಡಿದ ಯುವ ಬ್ಯಾಟ್ಸ್​ಮನ್

ಆಸ್ಟ್ರೇಲಿಯಾಗೆ ಬೆಂಡೆತ್ತಿದ ನಿತೀಶ್​ ಕುಮಾರ್.. ಪುಷ್ಪ ಸ್ಟೈಲ್ ಮಾಡಿದ ಯುವ ಬ್ಯಾಟ್ಸ್​ಮನ್

ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ 171 ಎಸೆತಗಳಲ್ಲಿ ಚೊಚ್ಚಲ ಶತಕ ಪೂರೈಸಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 3 ರನ್​ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ 24 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಯಶಸ್ವಿ ಜೈಸ್ವಾಲ್ ಶತಕದ ಜೊತೆಯಾಟ ಪ್ರದರ್ಶಿಸಿದರು. ಆದರೆ ತಂಡದ ಮೊತ್ತ 153 ರನ್ ಆಗಿದ್ದ ವೇಳೆ ರನ್​ ಕದಿಯುವ ಯತ್ನದಲ್ಲಿ ಯಶಸ್ವಿ ಜೈಸ್ವಾಲ್ (82) ರನೌಟ್ ಆಗಿ ಹೊರ ನಡೆದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (36) ಸಹ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಆಕಾಶ್ ದೀಪ್ (0) ಶೂನ್ಯಕ್ಕೆ ಔಟಾದರೆ, ರಿಷಭ್ ಪಂತ್ 28 ರನ್​ಗಳಿಸಲಷ್ಟೇ ಶಕ್ತರಾದರು.

ಈ ಹಂತದಲ್ಲಿ ಕಣಕ್ಕಿಳಿದ ನಿತೀಶ್ ಕುಮಾರ್ ರೆಡ್ಡಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಎಚ್ಚರಿಕೆಯೊಂದಿಗೆ ರನ್ ಗಳಿಸುತ್ತಾ ಸಾಗಿದ ನಿತೀಶ್ 81 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿಯ ಬಳಿಕ ಆಸೀಸ್ ಬೌಲರ್​​ಗಳನ್ನು ಕಾಡಿದ ಯುವ ದಾಂಡಿಗ ಟೀಮ್ ಇಂಡಿಯಾ ಮೊತ್ತವನ್ನು 300ರ ಗಡಿದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ಅಲ್ಲದೆ 150 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​​ಗಳೊಂದಿಗೆ ಭರ್ಜರಿ ಶತಕ ಸಿಡಿಸಿದರು. ನಿತೀಶ್ ಕುಮಾರ್ ರೆಡ್ಡಿ ಅವರ ಆಕರ್ಷಕ ಶತಕದ ನೆರವಿನಿಂದ ಟೀಮ್ ಇಂಡಿಯಾ 110 ಓವರ್​ಗಳ ಮುಕ್ತಾಯದ ವೇಳೆಗೆ 7 ವಿಕೆಟ್ ಕಳೆದುಕೊಂಡು 350 ರನ್ ಕಲೆಹಾಕಿದೆ.

ಬಾಂಗ್ಲಾದೇಶ ವಿರುದ್ಧ ನಿತೀಶ್ ರೆಡ್ಡಿ ಸಿಡಿಲಬ್ಬರ ಬ್ಯಾಟಿಂಗ್

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments