#Exclusive NewsTop Newsಉಪ ಚುನಾವಣೆರಾಜಕೀಯಸುದ್ದಿ

ಎಚ್‌.ಡಿ.ಕುಮಾರಸ್ವಾಮಿ, ನಿಖಿಲ್‌ ವಿರುದ್ಧ ಬಲವಂತದ ಕ್ರಮ ಬೇಡ : ಹೈಕೋರ್ಟ್‌

ಬೆಂಗಳೂರು :  ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ದೂರಿನ ಮೇರೆಗೆ ದಾಖಲಿಸಿಕೊಳ್ಳಲಾದ ಪ್ರಕರಣದಲ್ಲಿ ಈ ಆದೇಶ ಹೊರಡಿಸಿದೆ.

ಬೆಂಗಳೂರಿನ ಸಂಜಯ್‌ನಗರ ಪೊಲೀಸ್​ ಠಾಣೆಯಲ್ಲಿ ಎಚ್‌ಡಿಕೆ ವಿರುದ್ಧ ಎಫ್​ಐಆರ್ ದಾಖಲಾಗಿತ್ತು.ಈ ಪ್ರಕರಣ ರದ್ದು ಕೋರಿ ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸುರೇಶ್ ಬಾಬು ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ತೀರ್ಪು ನೀಡಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕುಮಾರಸ್ವಾಮಿ ಅವರಿಗೆ ನೀಡಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಹಾಲಿ ಮತ್ತು ಮಾಜಿ ಸಂಸದರು/ಶಾಸಕರ ವಿರುದ್ಧದ ಮೊಕದ್ದಮೆಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ವಿಚಾರಣೆಗೆ ಮುಂದಿನ ಕ್ರಮ ಕೈಗೊಳ್ಳದಂತೆ ನ್ಯಾಯಾಧೀಶರು ಪ್ರಾಸಿಕ್ಯೂಷನ್‌ಗೆ ತಡೆ ನೀಡಿದ್ದಾರೆ. ಬುಧವಾರ ಚನ್ನಪಟ್ಟಣದ ಅಂಬಡಾಹಳ್ಳಿಯಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದರು.ತಮ್ಮ ವಿರುದ್ಧದ ಎಫ್‌ಐಆರ್ ಹಾಸ್ಯಾಸ್ಪದ ಮತ್ತು ದುರುದ್ದೇಶಪೂರಿತವಾಗಿದೆ ಎಂದು ಹೇಳಿದ ಕುಮಾರಸ್ವಾಮಿ, ಕೋರ್ಟ್ ಮೂಲಕ ಉತ್ತರ ನೀಡುವುದಾಗಿ ತಿಳಿಸಿದ್ದರು.

Comments (0)

Your email address will not be published. Required fields are marked *

Back to top button