Top Newsರಾಜಕೀಯರಾಜ್ಯಸುದ್ದಿ

ರಾಜ್ಯದ 9 ವಿವಿಗಳನ್ನು ಮುಚ್ಚುವ ತೀರ್ಮಾನ ಮಾಡಿಲ್ಲ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನವಾಗಿಲ್ಲ. ಸಂಪುಟ ಉಪ ಸಮಿತಿಯ ವರದಿಯೇ ಇನ್ನೂ ಬಂದಿಲ್ಲ. ವರದಿ ಬರುವ ಮುಂಚೆಯೇ ಬಿಜೆಪಿ ಯಾಕಿಷ್ಟು ಆತಂಕ ವ್ಯಕ್ತಪಡಿಸುತ್ತಿದೆ ಎಂದು  ಸಿಎಂ  ಸಿದ್ದರಾಮಯ್ಯ ಪ್ರಶ್ನಿಸಿದರು.

ಈ ಕುರಿತು ವಿಧಾಸಸಭೆಯಲ್ಲಿ ವಿಪಕ್ಷ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು, , ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಪ ಸಮಿತಿ ವರದಿ ಕೊಡುವುದು ಬಾಕಿ ಇದೆ. ವರದಿ ಬರುತ್ತಿದ್ದಂತೆ ಅದನ್ನು ಸಂಪುಟದ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಇನ್ನೂ ವರದಿ ಬಂದಿಲ್ಲ, ಆದ್ದರಿಂದ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತೇವೆ ಅನ್ನುವುದು ಸರಿಯಲ್ಲ. ಈ ಬಗ್ಗೆ ಯಾವುದೇ ತೀರ್ಮಾನ ಈವರೆಗೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Comments (0)

Your email address will not be published. Required fields are marked *

Back to top button