ರಾಜಕೀಯ

ಯಾವುದೇ ಮಸೀದಿ, ಕಬ್ರಸ್ತಾನ ಮುಟ್ಟಲ್ಲ; ರವಿಶಂಕರ್ ಪ್ರಸಾದ್

ನವದೆಹಲಿ: ವಕ್ಫ್‌ ತಿದ್ದುಪಡಿ ಮಸೂದೆಗೆ ಮುಸ್ಲಿಂ ಸಮುದಾಯ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಬಿಜೆಪಿ ಸಂಸದ ರವಿಶಂಕರ್‌ ಪ್ರಸಾದ್‌ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಮಸೀದಿ, ಪೂಜಾ ಸ್ಥಳ ಅಥವಾ ‘ಕಬ್ರಸ್ತಾನ್’ (ಸ್ಮಶಾನ) ಮುಟ್ಟುವುದಿಲ್ಲ ಎಂದು ಮಸೂದೆ ಕುರಿತು ಸ್ಪಷ್ಟಪಡಿಸಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿರುವ ವಕ್ಫ್ (ತಿದ್ದುಪಡಿ) ಮಸೂದೆಯು ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಪ್ರಯೋಜನವನ್ನು ನೀಡುತ್ತದೆ. ಪಾರದರ್ಶಕತೆಯನ್ನು ಖಚಿತಪಡಿಸುತ್ತದೆ ಎಂದು ಪ್ರಸಾದ್‌ ತಿಳಿಸಿದ್ದಾರೆ

ವಿಷಯವು ತುಂಬಾ ಸರಳ ಮತ್ತು ನೇರವಾಗಿದೆ. ವಕ್ಫ್ ಅನ್ನು ರಚಿಸಿದ ‘ವಖಿಫ್’ನ ಉದ್ದೇಶವನ್ನು ವ್ಯವಸ್ಥಾಪಕರಾಗಿರುವ ‘ಮುತ್ತವಲಿ’ ಸರಿಯಾಗಿ ಕಾರ್ಯಗತಗೊಳಿಸುತ್ತಿದ್ದಾರೆಯೇ ಅಥವಾ ಇಲ್ಲವೇ ಎಂಬುದಷ್ಟೇ ಇದರ ಉದಾತ್ತ ಉದ್ದೇಶವಾಗಿದೆ. ವಕ್ಫ್ ಧಾರ್ಮಿಕ ಸಂಸ್ಥೆಯಲ್ಲ. ಅದು ಕಾನೂನುಬದ್ಧ ಅಥವಾ ಶಾಸನಬದ್ಧ ಸಂಸ್ಥೆಯಾಗಿದೆ. ‘ಮುತ್ತವಲಿ’ ಕೇವಲ ಸೂಪರಿಂಟೆಂಡೆಂಟ್ ಅಥವಾ ವ್ಯವಸ್ಥಾಪಕ. ಆಸ್ತಿಯ ಮೇಲೆ ಅವರಿಗೆ ಯಾವುದೇ ಹಕ್ಕುಗಳಿಲ್ಲ. ಏಕೆಂದರೆ ವಕ್ಫ್ ಅನ್ನು ರಚಿಸಿದ ನಂತರ, ಆಸ್ತಿ ಅಲ್ಲಾಹನದ್ದಾಗಿರುತ್ತದೆ. ಮಸೂದೆ ಮುಸ್ಲಿಂ ಮಹಿಳೆಯರಿಗೆ ಸಬಲೀಕರಣ ನೀಡುತ್ತದೆ. ವಿಧವೆಯರು ಮತ್ತು ಶೋಷಣೆಗೆ ಒಳಗಾದ ಜನತೆಗೆ ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button