Friday, September 12, 2025
26.7 C
Bengaluru
Google search engine
LIVE
ಮನೆ#Exclusive Newsಕಾಂಗ್ರೆಸ್ ಎಷ್ಟೇ ಟೋಕನ್ ಕೊಟ್ರೂ ಗೆಲ್ಲುವುದು NDA ಅಭ್ಯರ್ಥಿ ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಕಾಂಗ್ರೆಸ್ ಎಷ್ಟೇ ಟೋಕನ್ ಕೊಟ್ರೂ ಗೆಲ್ಲುವುದು NDA ಅಭ್ಯರ್ಥಿ ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ:ರಾಜ್ಯ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ “ಟೋಕನ್” ಮೊರೆ ಹೋಗಿದೆ, ಆದರೆ  ಕಾಂಗ್ರೇಸ್​ ಎಷ್ಟೇ ಟೋಕನ್ ಕೊಟ್ಟರು ಗೆಲ್ಲುವುದು ಮಾತ್ರ NDA ಅಭ್ಯರ್ಥಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಶತಾಯ ಗತಾಯ ಉಪ ಚುನಾವಣೆ ಗೆಲ್ಲಬೇಕೆಂಬ ಭರದಲ್ಲಿ, ಕಾಂಗ್ರೆಸ್ ಪಕ್ಷ ಟೋಕನ್ ಮೂಲಕ ಹಣ ಹಂಚಿಕೆ ಶುರು ಮಾಡಿದೆ. ಟೋಕನ್ ಹಂಚಿದ ಕಾಂಗ್ರೆಸ್ ಅದನ್ನು ತೋರಿಸಿದವರಿಗೆ ಹಣ ಕೊಟ್ಟು ಕಳಿಸುವ ವ್ಯವಸ್ಥೆ ಮಾಡಿದೆ ಎಂಬುದು ಮಾದ್ಯಮಗಳಲ್ಲಿ ವರದಿಯಾಗಿದೆ ಎಂದು ಉಲ್ಲೇಖಿಸಿದ ಸಚಿವರು, ಕಾಂಗ್ರೆಸ್ ಲೂಟಿ ಮಾಡಿದ್ದನ್ನು ಹೀಗೆ ಹಂಚುತ್ತಿದೆ ಎಂದು ದೂರಿದರು. ಕಾಂಗ್ರೆಸ್ ಅದೆಷ್ಟೇ ಟೋಕನ್ ಕೊಟ್ರೂ ಗೆಲ್ಲೋದು ನಾವೇ, ರಾಜ್ಯದಲ್ಲಿ ನಡೆಯುತ್ತಿರುವ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅದೆಷ್ಟೇ ಟೋಕನ್, ಹಣ ಹಂಚಿದರೂ ಗೆಲ್ಲೋದು ನಾವೇ. ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಪರ ಒಲವಿದೆ. ಪ್ರಚಾರ ವೇಳೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹಾಗಾಗಿ NDA ಅಭೂತಪೂರ್ವ ಗೆಲುವು ಸಾಧಿಸಲಿದೆ. ಸಂಡೂರು, ಶಿಗ್ಗಾಂವಿಯಲ್ಲಿ ಬಿಜೆಪಿ ಮತ್ತು ಚನ್ನಪಟ್ಟಣದಲ್ಲಿ ಜೆಡಿಎಸ್ ಗೆಲುವು ನಿಶ್ಚಿತ ಎಂದು ಸಚಿವ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಜತೆಗೆ ಕಾಂಗ್ರೆಸ್ ನವರು ಬುದ್ದಿ ಇದ್ದು ಮಾಡ್ತೀದಾರೋ,ಬುದ್ದಿ ಇಲ್ಲದೆ ಮಾತಾಡ್ತೀದಾರೆ ಗೊತ್ತಿಲ್ಲ. ಅವರ ದುರುಳ ಬುದ್ದಿಯಿಂದ ಮಾಡತೀದಾರೆ ಅನಸ್ತಿದೆ. ಕಾಂಗ್ರೆಸ್ ನವರು ಬಿಜೆಪಿ ವಕ್ಫ ಆಸ್ತಿ ಸಂರಕ್ಷಣೆ ಮಾಡತೀದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments