#Exclusive NewsTop Newsರಾಜಕೀಯಸುದ್ದಿ

ಎಷ್ಟೇ ಚಿರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ ; ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸಚಿನ್‌ ಪಂಚಾಳ್‌  ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ನಾನು ಪತ್ರ ಬರೆದಿದ್ದೆ. ಸಿಎಂ ಮತ್ತು ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿ ಮನವಿ ಮಾಡಿದ್ದೆ. ಇದರಂತೆ ಈಗ ಗೃಹ ಸಚಿವರು ಸಿಐಡಿ (CID) ತನಿಖೆಗೆ ಆದೇಶ ಮಾಡಿದ್ದಾರೆ .ಎಷ್ಟೇ ಚಿರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.

ಬಿಜೆಪಿ ಅವರಿಗೆ ಸಿಬಿಐ  ಮೇಲೆ ಪ್ರೀತಿ ಜಾಸ್ತಿ. ಹೀಗಾಗಿ ಸಿಬಿಐ ತನಿಖೆಗೆ ಕೇಳುತ್ತಾರೆ. ವರ್ಷಗಳ ಹಿಂದೆ ಬಿಜೆಪಿ ಕೈಯಲ್ಲಿ ಎಲ್ಲಾ ಸಂಸ್ಥೆಗಳು ಇತ್ತು ಏನ್ ಮಾಡಿದರು? ಬಿಜೆಪಿ ಯಾರದ್ದೋ ತಲೆ ದಂಡ ಆಗುತ್ತೆ ಅಂತ ಕಾಯ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಯಾರ ತಲೆ ತಂಡ ಆಗುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು.

Comments (0)

Your email address will not be published. Required fields are marked *

Back to top button