ರಾಜಕೀಯರಾಜ್ಯಸುದ್ದಿ

ಹಕ್ಕಿಜ್ವರ ಯಾರು ಆತಂಕ ಪಡುವ ಅಗತ್ಯವಿಲ್ಲ; ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದರೂ ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ, ಆದ್ದರಿಂದ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್ ಹೇಳಿದರು. ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಕೋಳಿಮೊಟ್ಟೆ ಹಾಗೂ ಮಾಂಸ ಸೇವಿಸುವಾಗ ಕೆಲವು ಎಚ್ಚರಿಕೆಯನ್ನು ಅನುಸರಿಸಬೇಕು. ಮೊಟ್ಟೆ ಮತ್ತು ಮಾಂಸವನ್ನು ೭೦ ಡಿಗ್ರಿ ಉಷ್ಣಾಂಶದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಬೇಯಿಸಬೇಕು. ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದಂತೆ ಎಚ್ಚರಿಕೆ ವಹಿಸುವಂತೆ ಅವರು ಸಲಹೆ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button