Saturday, September 13, 2025
27.2 C
Bengaluru
Google search engine
LIVE
ಮನೆ#Exclusive Newsಮುಂದಿನ ದೆಹಲಿ ಚುನಾವಣೆಯಲ್ಲಿ ಆಪ್ ಪಕ್ಷವು ಯಾವುದೇ ಪಕ್ಷದ ಮೈತ್ರಿ ಇಲ್ಲ – ಅರವಿಂದ್ ಕೇಜ್ರಿವಾಲ್

ಮುಂದಿನ ದೆಹಲಿ ಚುನಾವಣೆಯಲ್ಲಿ ಆಪ್ ಪಕ್ಷವು ಯಾವುದೇ ಪಕ್ಷದ ಮೈತ್ರಿ ಇಲ್ಲ – ಅರವಿಂದ್ ಕೇಜ್ರಿವಾಲ್

ನವದೆಹಲಿ: ಮುಂದಿನ ವರ್ಷದ ಆರಂಭದಲ್ಲೇ ಎದುರಾಗಲಿರುವ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಎಎಪಿ ಸಂಚಾಲಕ ಅರವಿಂದ್​ ಕೇಜ್ರಿವಾಲ್​ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್​ ಜೊತೆ ಮೈತ್ರಿ ಮಾಡಿಕೊಳ್ಳುವ ಯಾವುದೇ ಪ್ರಸ್ತಾಪಗಳು ನಮ್ಮ ಮುಂದೆ ಇಲ್ಲ ಎಂದು ಅವರು ದೃಢಪಡಿಸಿದ್ದಾರೆ

ಕಾಂಗ್ರೆಸ್​ ಮತ್ತು ಎಎಪಿ ನಡುವೆ ಮೈತ್ರಿ ಏರ್ಪಟ್ಟಿದೆ ಎಂಬ ಗಾಳಿ ಸುದ್ದಿಗೆ ಎಕ್ಸ್​ ಮೂಲಕ ಅವರು ಸ್ಪಷ್ಟನೆ ನೀಡಿರುವ ಕೇಜ್ರಿವಾಲ್​, ನಮ್ಮ ಪಕ್ಷ ಏಕಾಂಗಿಯಾಗಿ ಸ್ವಂತ ಬಲದ ಮೇಲೆ ಹೋರಾಟ ನಡೆಸಲಿದೆ. ಕಾಂಗ್ರೆಸ್​ ಜೊತೆಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.

ಭರ್ಜರಿ ಸಿದ್ಧತೆಯಲ್ಲಿ ಎಎಪಿ: ಮುಂದಿನ ವರ್ಷದ ಆರಂಭದಲ್ಲೇ ಎದುರಾಗಲಿರುವ ವಿಧಾನಸಭಾ ಚುನಾವಣೆಗೆ ಎಎಪಿ ಈಗಾಗಲೇ ಸಜ್ಜಾಗಿದ್ದು, ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ನಡುವೆ ಮತ ಪ್ರಚಾರ, ಆಶ್ವಾಸನೆ ನೀಡುವ ಮೂಲಕ ದೆಹಲಿ ಮತದಾರರ ಸೆಳೆಯುವ ಯತ್ನ ನಡೆಸಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments