ಬೆಂಗಳೂರು: ವಿಧಾನ ಪರಿಷತ್ನಲ್ಲಿ ಹಲವು ತಿಂಗಳುಗಳಿಂದ ಖಾಲಿ ಇದ್ದ ಸ್ಥಾನಗಳಿಗೆ ನಾಲ್ವರನ್ನು ನಾಮ ನಿರ್ದೇಶನ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾಲ್ಕು ಎಂಎಲ್ಸಿ ಸ್ಥಾನಗಳ ಅನುಮೋದಿಸಿ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಕೆಪಿಸಿಸಿ ಮುಖಂಡ ರಮೇಶ್ ಬಾಬು, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ, ಹಿರಿಯ ಪತ್ರಕರ್ತ ಕೆ. ಶಿವಕುಮಾರ್ ಮತ್ತು ದಲಿತ ಮುಖಂಡ ಎಫ್.ಹೆಚ್ ಜಕ್ಕಪ್ಪನವರ್ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.
ಮೂವರು 6 ವರ್ಷಗಳ ಅವಧಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆದ್ರೆ ರಮೇಶ್ ಬಾಬು ಅವರ ಅಧಿಕಾರ ಅವಧಿ 2026ರ ಜುಲೈ 21ರ ವರೆಗೆ ಮಾತ್ರ ಇರಲಿದೆ.