ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಂಧನ ಭೀತಿ ಎದುರಾಗಿದ್ದು, ಯಡಿಯೂರಪ್ಪಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶಿಸಿದೆ. ವಿಚಾರಣೆಗೆ ಬಿಎಸ್ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ವಾರಂಟ್ ಹೊರಡಿಸಲು ಪೊಲೀಸರು ನಿನ್ನೆ(ಜೂ.12) ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ.
ಮಹಿಳೆಯೊಬ್ಬರು ತಮ್ಮ ಅಪ್ರಾಪ್ತ ಪುತ್ರಿಯೊಂದಿಗೆ ಬಿಎಸ್‌ವೈ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಕಳೆದ ಮಾರ್ಚ್ ತಿಂಗಳಲ್ಲೇ ದೂರು ನೀಡಿದ್ದರು. ಆದರೆ, ಕಳೆದ ತಿಂಗಳು ಆ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ಬಿ ಎಸ್ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದರು.

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com