Thursday, November 20, 2025
24.6 C
Bengaluru
Google search engine
LIVE
ಮನೆ#Exclusive NewsTop Newsಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶಿಸ್ತುಕ್ರಮದ ನೋಟಿಸ್ ಜಾರಿ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶಿಸ್ತುಕ್ರಮದ ನೋಟಿಸ್ ಜಾರಿ

ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿದೆ.

ರಾಜ್ಯ ಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ನೀವು (ಬಸನಗೌಡ ಪಾಟೀಲ್ ಯತ್ನಾಳ್) ಮಾಡುತ್ತಿರುವ ನಿರಂತರ ವಾಗ್ದಾಳಿ ಮತ್ತು ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸುತ್ತಿರುವ ಬಗ್ಗೆ ಪಕ್ಷದ ವಿವಿಧ ವೇದಿಕೆಗಳಲ್ಲಿ ವರದಿಯಾಗಿದೆ. ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ಎಲ್ಲಾ ವಿಷಯಗಳ ಬಗ್ಗೆ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾಗಿ ಸಾರ್ವಜನಿಕವಾಗಿ ನೀವು ಹೇಳಿಕೆಗಳನ್ನು ನೀಡುತ್ತಿರುವುದು ಮತ್ತು ನಿಲುವುಗಳನ್ನು ವ್ಯಕ್ತಪಡಿಸುತ್ತಿರುವುದು ಮಾಧ್ಯಮಗಳಲ್ಲಿ ಮತ್ತು ವಿವಿಧ ಪಕ್ಷದ ವೇದಿಕೆಗಳಲ್ಲಿ ವರದಿಯಾಗಿದೆ. ಈ ಹಿಂದೆಯೂ ಹಲವು ಬಾರಿ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆಗ ನೀವು ಸದ್ವರ್ತನೆಯ ಭರವಸೆ ನೀಡಿದ್ದರೂ ಅಶಿಸ್ತಿನ ಕೃತ್ಯಗಳು ನಿಮ್ಮಿಂದ ಅವ್ಯಾಹತವಾಗಿ ನಡೆಯುತ್ತಿರುವುದು ಆತಂಕಕಾರಿ ಸಂಗತಿ. ಇದು ಪಕ್ಷದ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ. ನಿಮ್ಮ ಹಿರಿತನ ಮತ್ತು ಪಕ್ಷದಲ್ಲಿನ ದೀರ್ಘಾವಧಿಯನ್ನು ಗಮನದಲ್ಲಿಟ್ಟುಕೊಂಡು, ಈ ಹಿಂದೆ ನೀವು ಸಲ್ಲಿಸಿದ ವಿವರಣೆಗಳ ಬಗ್ಗೆ ಕೇಂದ್ರ ಶಿಸ್ತು ಸಮಿತಿಯು ಮೃದುವಾದ ದೃಷ್ಟಿಕೋನವನ್ನು ತೆಗೆದುಕೊಂಡಿತ್ತು ಎಂದು ಶೋಕಾಸ್ ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ.

ಈ ಮೂಲಕ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆ ಯತ್ನಾಳ್ ವಿರುದ್ಧ ಬಿಜೆಪಿ ಹೈಕಮಾಂಡ್ ಕ್ರಮಕ್ಕೆ ಮುಂದಾಗಿದೆ. ಹತ್ತು ದಿನಗಳೊಳಗೆ ಸ್ಪಷ್ಟೀಕರಣ ಕೊಡದಿದ್ದಲ್ಲಿ ನಿಮ್ಮ ತಪ್ಪು ನೀವೇ ಒಪ್ಪಿಕೊಂಡಂತೆ. ನಾವು ಕ್ರಮಕ್ಕೆ ಮುಂದಾಗಲು ನಿಮ್ಮ ಒಪ್ಪಿಗೆ ಇದೆಯೆಂದು ಭಾವಿಸುತ್ತೇವೆ. ಈ ಹಿಂದೆಯೂ ಹಲವು ಬಾರಿ ನೋಟಿಸ್ ಜಾರಿ ಮಾಡಲಾಗಿತ್ತು. ತಪ್ಪು ಸರಿಪಡಿಸಿಕೊಳ್ಳೋದಾಗಿ ಭರವಸೆ ಕೊಟ್ಟಿದ್ದಿರಿ. ಆದರೆ ಯಾವುದೂ ಬದಲಾವಣೆ ಆಗಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಹೈಕಮಾಂಡ್ ನಮ್ಮ ಪರ ಇದೆ ಎನ್ನುತ್ತಿದ್ದ ಯತ್ನಾಳ್ ತಂಡಕ್ಕೆ ಭಾರೀ ಹಿನ್ನಡೆಯಾಗಿದ್ದು, ಸದ್ಯಕ್ಕೆ ವಿಜಯೇಂದ್ರ ಮೇಲುಗೈ ಸಾಧಿಸಿದ್ದಾರೆ. ಬಿಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ನೀಡಿದ್ದ ಬಹಿರಂಗ ಹೇಳಿಕೆಗಳ ಕುರಿತು ಹೈಕಮಾಂಡ್ ಗರಂ ಆಗಿದೆ. ಇದೀಗ ಶೋಕಾಸ್ ನೊಟೀಸ್ ಜಾರಿಯಾದ ಹಿನ್ನೆಲೆ ಯತ್ನಾಳ್ ಶೋಕಾಸ್ ನೊಟೀಸ್‌ಗೆ ಉತ್ತರ ಕೊಡುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಉತ್ತರ ಕೊಡುತ್ತೇನೆ. ಹಾಗೆಯೇ ರಾಜ್ಯ ಬಿಜೆಪಿಯ ವಸ್ತುಸ್ಥಿತಿಯನ್ನೂ ವರಿಷ್ಠರಿಗೆ ತಿಳಿಸೋದಾಗಿ ಯತ್ನಾಳ್ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಇನ್ನು ಸೋಮವಾರ ಜೆಪಿಸಿ ಅಧ್ಯಕ್ಷ ಜಗದಾಂಬಿಕ ಪಾಲ್ ಅವರಿಗೆ ವಕ್ಫ್ ವಿರೋಧಿ ಜನಜಾಗೃತಿ ವರದಿ ಸಲ್ಲಿಸುವ ಸಲುವಾಗಿ ಭಾನುವಾರವೇ ಯತ್ನಾಳ್ ದೆಹಲಿಗೆ ತೆರಳಿದ್ದಾರೆ. ಇಂದು (ಸೋಮವಾರ) ಉಳಿದ ರೆಬೆಲ್ ನಾಯಕರು ಯತ್ನಾಳ್‌ರನ್ನು ಕೂಡಿಕೊಳ್ಳಲಿದ್ದಾರೆ.‌

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments