ರಾಜಕೀಯರಾಜ್ಯಸುದ್ದಿ

ನುಡಿದಂತೆ ನಡೆಯದ ಬಿಜೆಪಿ: ಸಿಎಂ ವಾಗ್ದಾಳಿ

 

ಮಡಿಕೇರಿ: ಕೊಟ್ಟ ಭರಸೆಗಳನ್ನು ಬಿಜೆಪಿ ಈ ಹಿಂದೆಯೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿರುದ್ಧ ವಾಗ್ದಾಳಿ ನಡೆಸಿದರು.

ಮಡಿಕೇರಿಯ ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಕರ್ನಾಟಕದಲ್ಲಿ 2018 ರಲ್ಲಿ 600 ಭರವಸೆಗಳನ್ನು ಕೊಟ್ಟ ಬಿಜೆಪಿ 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂದರು.

ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಗಳ ಕುರಿತು ಸಿಎಂ ಸಿದ್ದರಾಮಯ್ಯ ಮಡಿಕೇರಿಯಲ್ಲಿ ಇಂದು ಮಾತನಾಡಿದರು.

ಬಿಜೆಪಿ ಪ್ರಣಾಳಿಕೆಯಲ್ಲಿ ಬಡ ಕುಟುಂಬಗಳಿಗೆ ಕಡಿಮೆ ಬೆಲೆಗೆ ಗ್ಯಾಸ್, ಯುವಶಕ್ತಿ, ನಾರಿಶಕ್ತಿ, ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಮೊದಲೇ ಮಾಡಿರುವ ಘೋಷಣೆಗಳ ಬಗ್ಗೆ ಚರ್ಚೆಯಾಗಬೇಕು. ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರೂಪಾಯಿ ತಂದುಕೊಟ್ಟರೇ, 2ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡಿದ ರೇ, ಮೆಕ್ ಇನ್ ಇಂಡಿಯಾ , ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಯಿತೇ ಎಂದು ಪ್ರಶ್ನಿಸಿದರು.

ಪ್ರಪಂಚದಾದ್ಯಂತ ರಾಮಾಯಣ ಅಭಿವೃದ್ಧಿ ಹಾಗೂ ಅಯೋಧ್ಯೆಯ ಅಭಿವೃದ್ಧಿ ಕೈಗೊಳ್ಳುವುದಾಗಿ ಬಿಜೆಪಿ ಹೇಳಿರುವ ಬಗ್ಗೆ ಮಾತನಾಡಿ ಪ್ರಣಾಳಿಕೆಯನ್ನು ನೋಡಿಲ್ಲ. ನೋಡಿದ ನಂತರ ಉತ್ತರಿಸುವೆ ಎಂದರು.

ಅವಲೋಕನ ಅಗತ್ಯ
10 ವರ್ಷಗಳಲ್ಲಿ ಪ್ರಧಾನಮಂತ್ರಿಯಾಗಿ ಏನು ಮಾಡಿದ್ದಾರೆ ಎಂದು ಮೊದಲು ಹೇಳಬೇಕು. ಅದರ ಅವಲೋಕನ ಆದ ನಂತರ ಮುಂದಿನದ್ದು ಹೇಳಬೇಕು. ಬಿಜೆಪಿ ಸರ್ಕಾರ 25 ಕೋಟಿ ಉದ್ಯೋಗ ಸೃಷ್ಟಿಸಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. 25 ಕೋಟಿ ಉದ್ಯೋಗ ಯಾರಿಗೆ ಕೊಟ್ಟಿದ್ದಾರೆ ಎಂದರು.

ಆರೋಗ್ಯ ವಿಚಾರಿಸಿದ್ದೇನೆ
ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಸೋಲುವ ಭಯದಿಂದ ಸಿಎಂ ಭೇಟಿ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿರುವ ಬಗ್ಗೆ ಮಾತನಾಡಿ ನಾನು ಶ್ರೀನಿವಾಸ ಪ್ರಸಾದ್ ರಾಜಕೀಯದಲ್ಲಿ ಸಮಕಾಲೀನರು. ಅವರು 74ರಲ್ಲಿಯೇ ವಿಧಾನಸಭೆಗೆ ಸ್ಪರ್ಧಿಸಿದ್ದರು, ಒಟ್ಟಿಗೆ ರಾಜಕಾರಣದಲ್ಲಿದ್ದೆವು. ದೀರ್ಘ ಕಾಲದ ಸ್ನೇಹಿತ. ಅವರು ರಾಜಕೀಯದಿಂದ ನಿವೃತ್ತರಾಗಿ ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇಂಥ ಸಂದರ್ಭದಲ್ಲಿ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದೇನೆ ಎಂದರು.

 

Comments (0)

Your email address will not be published. Required fields are marked *

Back to top button