Monday, June 23, 2025
26.6 C
Bengaluru
Google search engine
LIVE
ಮನೆ#Exclusive NewsTop Newsಮೊಬೈಲ್ ಗೀಳಿಗೆ ಪ್ರಾಣ ಕಳೆದುಕೊಂಡ ಬಾಲಕ!

ಮೊಬೈಲ್ ಗೀಳಿಗೆ ಪ್ರಾಣ ಕಳೆದುಕೊಂಡ ಬಾಲಕ!

ಬೆಂಗಳೂರು: ಮೊಬೈಲ್ ಗೀಳಿಗೆ ಬಾಲಕನೋರ್ವ ನೇಣಿಗೆ ಶರಣಾಗಿ ಪ್ರಾಣ ಕಳೆದುಕೊಂಡ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿ ರತ್ನನಗರದಲ್ಲಿ ನಡೆದಿದೆ.

ಧ್ರುವ ಆತ್ಮಹತ್ಯೆಗೆ ಶರಣಾದ (13) ವರ್ಷದ ಬಾಲಕ. ಈತ 9 ವರ್ಷದ ತಂಗಿಯ ಮುಂದೆಯೇ ಉಡದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವು ಇಲ್ಲದೆ ತಂಗಿ ಸುಮ್ಮನೆ ನೋಡುತ್ತಿದ್ದಳು.

ಧ್ರುವ ಪೋಷಕರ ಮಾತು ಕೇಳದೆ ಹೆಚ್ಚಾಗಿ ಮೊಬೈಲ್ ಬಳಸುತ್ತಿದ್ದ ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ. ಮಂಗಳವಾರ ಪೋಷಕರು ಕೆಲಸಕ್ಕೆ ಹೋಗಿದ್ದರು. ಶಾಲೆ ಮುಗಿಸಿ ಬಂದ ಅಣ್ಣ-ತಂಗಿ ಮಾತ್ರ ಮನೆಯಲ್ಲಿದ್ದರು. ಆಗ ಬಾಲಕ ಪ್ಯಾಂಟ್ ತೆಗೆದು ಸೊಂಟದ ಉಡದಾರ ಫ್ಯಾನ್‌ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸಂಜೆ 7 ಗಂಟೆಯ ಸುಮಾರಿಗೆ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ. ಆಗ ಉಡದಾರ ಕುತ್ತಿಗೆಗೆ ಬಿಗಿದು, ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಅಣ್ಣ ಏನು ಮಾಡಿಕೊಳ್ಳುತ್ತಿದ್ದಾನೆ ಎಂಬ ಅರಿವು ಇಲ್ಲದೇ ತಂಗಿ ಸುಮ್ಮನೆ ನೋಡುತ್ತಿದ್ದಳು. ಬಾಲಕ ಕೆಳಗೆ ಬಿದ್ದ ಸಮಯಕ್ಕೆ ಕೆಲಸ ಮುಗಿಸಿ ತಾಯಿ ಬಂದಿದ್ದಾರೆ. ಘಟನೆ ನೋಡಿ ಆತಂಕಗೊಂಡ ತಾಯಿ ಅಕ್ಕಪಕ್ಕದವರ ಸಹಾಯ ಪಡೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಬಾಲಕನ ತಂದೆ ಬಸವರಾಜ್ ಬೇಕರಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಆತ್ಮಹತ್ಯೆಗೆ ಮಾಡಿಕೊಳ್ಳಲು ಕಾರಣವೇನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಲಕ ಅತಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಇದೇ ವಿಷಯವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments