Thursday, December 11, 2025
14.8 C
Bengaluru
Google search engine
LIVE
ಮನೆ#Exclusive Newsಮಾಜಿ ಶಾಸಕ ಆರ್.ನಾರಾಯಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಮಾಜಿ ಶಾಸಕ ಆರ್.ನಾರಾಯಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು:ಕಾಂಗ್ರೆಸ್ ಮಾಜಿ ಶಾಸಕರಾದ ಆರ್.ನಾರಾಯಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

“ಆರ್.ನಾರಾಯಣ ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ನಾರಾಯಣ ಅವರು ಸತತವಾಗಿ ಮೂರು ಬಾರಿ ಶಾಸಕರಾಗಿದ್ದರು. ಎಸ್.ಎಂ ಕೃಷ್ಣ ಅವರ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಅಧ್ಯಕ್ಷರೂ ಆಗಿದ್ದರು.

ಕೆಂಗಲ್ ಹನುಮಂತಯ್ಯ ಅವರ ಅನುಯಾಯಿಯಾಗಿ ಕಾಂಗ್ರೆಸ್ ಪಕ್ಷದ ಭದ್ರ ಬುನಾದಿಗೆ ಶ್ರಮಿಸಿದವರು. ತಮ್ಮ ಅಚ್ಚುಕಟ್ಟುತನದಿಂದ ಕೂಡಿದ ಕೆಲಸಕ್ಕೆ ಹೆಸರಾಗಿದ್ದವರು.

ತುಮಕೂರು ಜಿಲ್ಲೆಯಲ್ಲಿ ಪಕ್ಷದ ಪ್ರಮುಖ ನಾಯಕರಾಗಿದ್ದರು. ಕಾಂಗ್ರೆಸ್ ಪಕ್ಷದ ಏಳಿಗೆಗೆ ಇವರ ಕೊಡುಗೆ ಅಪಾರ. ಸರಳ, ಸಜ್ಜನಿಕೆಯ ವ್ಯಕ್ತಿತ್ವ ದೂರವಾಗಿರುವುದು ನೋವಿನ ಸಂಗತಿ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments