ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಮೊದಲು ಪ್ರತಿಕ್ರಿಯೆ ನೀಡಿದ್ದು, SIT ತನಿಖೆಯನ್ನು ಸ್ವಾಗತ ಮಾಡಿದ್ದೇವೆ. ಈಗ ಒಂದೊಂದೇ ಸತ್ಯಗಳು ಆಚೆಗೆ ಬರುತ್ತಿದೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.
ಇದೀಗ ಪ್ರಕರಣದಲ್ಲಿ ಒಂದೊಂದೆ ಸತ್ಯ ಸಂಗತಿ ಹೊರಬರ್ತಿವೆ. ಇದರ ಬಗ್ಗೆ ತನಿಖೆಯ ಸಂದರ್ಭದಲ್ಲಿ ಮಾತನಾಡಲ್ಲ. ನ್ಯಾಯ ಹತ್ತಿರದಲ್ಲಿದೆ. ನಾವು ನ್ಯಾಯವನ್ನು ನೋಡಲಿದ್ದೇವೆ ಎಂದು ಹೇಳಿದ್ದಾರೆ. ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸುವ ಎಲ್ಲರಿಗೂ ಧನ್ಯವಾದಗಳು ಎಂದರು.