ವಿಜಯನಗರ: ಕೆಎಸ್‍ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಸತ್ತೂರು ಗ್ರಾಮದಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ಮಹಿಳೆಯನ್ನು ಸುತ್ತೂರು ಗ್ರಾಮದ ಹನುಮಕ್ಕ (45) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬಸ್‍ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.

ಸಾರಿಗೆ ಬಸ್ ದಾವಣಗೆರೆಯಿಂದ ಹರಪ್ಪನಹಳ್ಳಿಗೆ ಹೋಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೇ ಪಲ್ಟಿಯಾಗಿದೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

By Veeresh

Leave a Reply

Your email address will not be published. Required fields are marked *

Verified by MonsterInsights