ಬೆಂಗಳೂರು: ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ. ಬೂತ್‌ನಲ್ಲಿ ಲೀಡ್ ಕೊಡಿಸಿ ಮತ್ತೆ ನಾಯಕತ್ವ ಕೇಳಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಾಲ್ಕು ಓಟು ಹಾಕಿಸದೆ ಬಂದು ಸ್ಥಾನ ಕೇಳ್ತಿರಾ. ಮೊದಲು ನಿಮ್ಮ ಬೂತ್ ನಲ್ಲಿ ಸಂಘಟನೆ ಮಾಡಿ. ಬೂತ್ ಲೀಡ್ ಕೊಡಿಸಿ ಬಂದು ನಾಯಕತ್ವ ಕೇಳಿ. ಇಲ್ಲದೆ ಹೊದ್ರೆ ನಾಯಕತ್ವ ಕೊಡಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು.
ಮೊದಲು ಪಕ್ಷ ಸಂಘಟನೆ ಮಾಡಿ, ಇಲ್ಲವೇ ಜಾಗ ಖಾಲಿ ಮಾಡಿ. ನಾವು ಹೊಸ ನಾಯಕತ್ವ ಬೆಳೆಸುತ್ತೇವೆ. ನಾನು ಸದ್ಯ ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ಇನ್ನೂ ಎಷ್ಟು ದಿನ ಇರ್ತೇನೆ ಅನ್ನುವುದು ಗೊತ್ತಿಲ್ಲ. ನಮ್ಮ ಪಕ್ಷದ ನಾಯಕತ್ವ ಬೂನಾದಿ ಗಟ್ಟಿ ಮಾಡಬೇಕು ಎಂದರು. ಬೂತ್ ಮಟ್ಟದಲ್ಲಿ ಗಟ್ಟಿ ಮಾಡಬೇಕು. ನಾನು ಡಿಸಿಎಂ ಆಗಿ ಒಂದು ವರ್ಷ ಪೂರೈಸಿದ್ದು ಮುಖ್ಯ ಅಲ್ಲ. ನಾನು ಕೆಪಿಸಿಸಿ ಅಧ್ಯಕ್ಷನಾದ ಬಳಿಕ ಪಕ್ಷ ಅಧಿಕಾರಕ್ಕೆ ಬಂತಲ್ಲ ಅದು ಮುಖ್ಯ ಎಂದರು.