Thursday, August 21, 2025
26.4 C
Bengaluru
Google search engine
LIVE
ಮನೆ#Exclusive NewsTop Newsಅನ್ನದಾತನ ಮೇಲೆ ಬರೆ ಎಳೆದ ಸರ್ಕಾರ-ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಆಕ್ರೋಶ

ಅನ್ನದಾತನ ಮೇಲೆ ಬರೆ ಎಳೆದ ಸರ್ಕಾರ-ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಆಕ್ರೋಶ

ರಾಜ್ಯ ಸರ್ಕಾರ ಹಾಲಿನ ಖರೀದಿ ದರದಲ್ಲಿ 1.50 ರೂ. ಕಡಿತ ಮಾಡಿದೆ ಎಂದು ಮಾಜಿ ಸಿಎಂ, ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್ ಸರಕಾರ ಅನ್ನದಾತನ ಮೇಲೆ ಬರೆ ಎಳೆಯುತ್ತಿದೆ. ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ ಖರೀದಿ ದರದಲ್ಲಿ 1.50 ರೂ. ಕಡಿತ ಮಾಡಿವೆ. (ಹೊಸ ಖರೀದಿ ದರ ₹30.50 ರಿಂದ ₹29ಕ್ಕೆ ಕುಸಿದಿದೆ). ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ ಬಿದ್ದಿದೆ. ನಮ್ಮದು ರೈತಪರ ಸರಕಾರ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತ ಗಮನ ಹರಿಸಬೇಕು. ಅವರಿಗೆ ಅಷ್ಟು ಸಮಯ ಇದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದು ಹೇಳಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments