ಗಂಗಾವತಿ: ಇಲ್ಲಿನ ಚಿಕ್ಕರಾಂಪುರ ಗ್ರಾಮ ಸಮೀಪದ ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿಯ ಹಣವನ್ನು ಎಣಿಕೆ ಮಾಡಲಾಗಿದ್ದು, ಪಾಕಿಸ್ತಾನ ಸೇರಿದಂತೆ ಹಲವು ದೇಶಗಳ ಹಣ ಸಂಗ್ರಹವಾಗಿವೆ. ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೂಚನೆ ಮೇರೆಗೆ ತಹಶೀಲ್ದಾರ್ ಯು. ನಾಗರಾಜ್ ನೇತೃತ್ವದಲ್ಲಿ ಇಂದು ಕಂದಾಯ ಇಲಾಖೆ ಹಾಗೂ ದೇಗುಲ ಸಿಬ್ಬಂದಿ ಹುಂಡಿ ಎಣಿಕೆ ಕಾರ್ಯ ಮಾಡಿದರು.
ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ಮಾರ್ಚ್ 27 ರಿಂದ ಮೇ.21 ರವರೆಗೆ ಒಟ್ಟು 56 ದಿನಗಳಲ್ಲಿ 31.21 ಲಕ್ಷ ಮೊತ್ತದ ಕಾಣಿಕೆ ಹಣ ಸಂಗ್ರಹವಾಗಿದೆ. ಇದರಲ್ಲಿ ಪಾಕಿಸ್ತಾನದ ಐದು ರೂಪಾಯಿ ಮುಖ ಬೆಲೆಯ ನಾಣ್ಯ, ಅಮೆರಿಕದ ಒಂದು ಸೆಂಟ್, ಮೊರಾಕ್ಕೊದ ಒಂದು ದಿರಮ್, ನೇಪಾಳದ ಒಂದು ನಾಣ್ಯ ಹಾಗೂ ಶ್ರೀಲಂಕಾದ ಐದು ರೂಪಾಯಿ ನಾಣ್ಯಗಳು ಸಂಗ್ರಹವಾಗಿವೆ.
ಇದಕ್ಕೂ ಮೊದಲು ಮಾರ್ಚ್ 26ರಂದು ನಡೆದಿದ್ದ ಹುಂಡಿ ಎಣಿಕೆಯಲ್ಲಿ 9.29 ಲಕ್ಷ ಮೊತ್ತದ ಹಣ ಸಂಗ್ರಹವಾಗಿತ್ತು. ಪ್ರತಿ ತಿಂಗಳು ಅಂಜನಾದ್ರಿಯ ಕಾಣಿಕೆ ಹುಂಡಿಯ ಆದಾಯ ಸರಾಸರಿ 18 ರಿಂದ 20 ಲಕ್ಷ ರೂಪಾಯಿ ಇದೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com