Tuesday, April 29, 2025
29.1 C
Bengaluru
LIVE
ಮನೆ#Exclusive NewsTop NewsBBMPಯಿಂದ 3,065 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ

BBMPಯಿಂದ 3,065 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) 2023-24ನೇ ಸಾಲಿನಲ್ಲಿ ಏಪ್ರಿಲ್ 1 ರಿಂದ ಜುಲೈ 31 ರವರೆಗೆ 3,065 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಗುರುವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ತುಷಾರ್ ಗಿರಿನಾಥ್ ಅವರು, ಒನ್ ಟೈಮ್ ಸೆಟಲ್​ಮೆಂಟ್​ ಯೋಜನೆಯಡಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ನೀಡಿದ್ದ ಗಡುವು ಜುಲೈ 31ಕ್ಕೆ ಮುಕ್ತಾಯವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ತೆರಿಗೆ ಸಂಗ್ರಹದಲ್ಲಿ 600 ಕೋಟಿ ರೂ. ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ.

ಪಾಲಿಕೆ ಕಂದಾಯ ಅಧಿಕಾರಿಗಳ ಪ್ರಕಾರ, ಒಟಿಎಸ್ ಯೋಜನೆಯಡಿ 1.14 ಲಕ್ಷ ಜನರಿಂದ 380.63 ಕೋಟಿ ರೂ. ತೆರಿಗೆ ಸಂಗ್ರಹಿಸಲಾಗಿದೆ. “ಕಳೆದ ವರ್ಷ ಇದೇ ಸಮಯದಲ್ಲಿ 2,457.30 ಕೋಟಿ ರೂ. ಸಂಗ್ರಹವಾಗಿತ್ತು. ಈ ವರ್ಷ ಪಾಲಿಕೆಯು 3,065.82 ಕೋಟಿ ರೂ. ಸಂಗ್ರಹಿಸಿದೆ. ಪಾಲಿಕೆಯು ತೆರಿಗೆ ಬಾಕಿ ಉಳಿಸಿಕೊಂಡಿದ್ದ ಸುಮಾರು ನಾಲ್ಕು ಲಕ್ಷ ಜನರಿಗೆ ಒಟಿಎಸ್ ಯೋಜನೆಯನ್ನು ಘೋಷಿಸಿದ ನಂತರ ಆದಾಯ ಹೆಚ್ಚಾಗಿದೆ.

ಭಾರೀ ಮಳೆ ಮತ್ತು ಸಾಫ್ಟ್‌ವೇರ್ ಸಮಸ್ಯೆಗಳಿಂದ ಅನೇಕ ಡಿಫಾಲ್ಟರ್‌ಗಳು ತೆರಿಗೆ ಪಾವತಿಸಲು ಸಾಧ್ಯವಾಗದ ಕಾರಣ ಒಟಿಎಸ್ ಗಡುವು ವಿಸ್ತರಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಗಿರಿನಾಥ್, ಇನ್ನೂ ಎಷ್ಟು ಮಂದಿ ಬಾಕಿ ಉಳಿಸಿಕೊಂಡಿದ್ದಾರೆ ಮತ್ತು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಬೇಡಿಕೆಗಳನ್ನು ಪರಿಶೀಲಿಸಿ ಪಾಲಿಕೆಯು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments