Wednesday, August 20, 2025
18.9 C
Bengaluru
Google search engine
LIVE
ಮನೆ#Exclusive NewsDGP ಓಂ ಪ್ರಕಾಶ್​ರನ್ನ ಕೊಂದ ಪತ್ನಿ ಪಲ್ಲವಿ..!

DGP ಓಂ ಪ್ರಕಾಶ್​ರನ್ನ ಕೊಂದ ಪತ್ನಿ ಪಲ್ಲವಿ..!

ಕರ್ನಾಟಕ ಮಾಜಿ ಡಿಜಿ & ಐಜಿಪಿ ಓಂ ಪ್ರಕಾಶ್ ಅವರನ್ನು ಸ್ವತಃ ಅವರ ಹೆಂಡತಿಯೇ ಚಾಕು ಇರಿದು ಕೊಲೆ ಮಾಡಿದ್ದಾರೆ. ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನ ಮನೆಯಲ್ಲಿ ಈ ಘಟನೆ ನಡೆದಿದೆ.

ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು​ ಹೆಂಡತಿಯೇ ಈ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಓಂ ಪ್ರಕಾಶ್ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಹತ್ಯೆ ಮಾಡಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಓಂ ಪ್ರಕಾಶ್ ಅವರ ಮೃತದೇವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್​ಜಾನ್ಸ್‌​ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಘಟನೆ ನಡೆದಾಗ ಓಂ ಪ್ರಕಾಶ್ ಮಗ ಹಾಗೂ ಅವರ ಸೊಸೆ ಮನೆಯಲ್ಲಿ ಇರಲಿಲ್ಲ.ಹೆಂಡತಿ ಪಲ್ಲವಿಯೇ ಆಸ್ತಿ ವಿಚಾರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಹಲವು ಬಾರಿ ಹಿರಿಯ ಅಧಿಕಾರಿ ಹತ್ತಿರ ಅಳಲು ತೋಡಿಕೊಂಡಿದ್ದ ಓಂ ಪ್ರಕಾಶ್​.ಹೆಂಡತಿ ಟಾರ್ಚರ್ ತಡಿಯೋಕೆ ಆಗ್ತಿಲ್ಲ ಎಂದು ಹೇಳಿಕೊಂಡಿದ್ದ ಮಾಜಿ ಐಜಿಪಿ.ಕೂಡಲೇ ಪೊಲೀಸರು ಸ್ಥಳಕ್ಕೆ ಬಂದು ಪತ್ನಿ ಪಲ್ಲವಿ ವಶಕ್ಕೆ ಪಡೆದಿದ್ದಾರೆ ದಾಂಡೇಲಿಯ ಆಸ್ತಿ ವಿಚಾರಕ್ಕೆ ಓಂಪ್ರಕಾಶ್ ಹತ್ಯೆ ಮಾಡಿದ್ದಾರೆ ಎನ್ನಲಾಗ್ತಿದೆ.

ಹಿರಿಯ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ ಅವರು 2015ರ ಮಾರ್ಚ್ 01 ದಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರುಆಗಿ ಅಧಿಕಾರ ವಹಿಸಿಕೊಂಡಿದ್ದರು. 1981 ರ ಬ್ಯಾಚ್ ಐಪಿಎಸ್ ಅಧಿಕಾರಿಯಾದ ಓಂ ಪ್ರಕಾಶ್, 38ನೇ ಡಿಜಿ ಮತ್ತು ಐಜಿಪಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ನಾಗರಿಕ ರಕ್ಷಣಾ ನಿರ್ದೇಶಕ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಓಂ ಪ್ರಕಾಶ್ ಬಿಹಾರದ ಚಂಪಾರಣ್ ಜಿಲ್ಲೆಯವರು. ಬಳ್ಳಾರಿಯ ಹರಪನಹಳ್ಳಿ ಉಪವಿಭಾಗದ ಎಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು. ನಂತರ, ರಾಜ್ಯ ಜಾಗೃತ ಆಯೋಗ ಮತ್ತು ಕರ್ನಾಟಕ ಲೋಕಾಯುಕ್ತ ಎಸ್ಪಿಯಾಗಿ ಮತ್ತು ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಎಸ್ಪಿಯಾಗಿ ಬಡ್ತಿ ಪಡೆದ್ದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments