#Exclusive NewsTop Newsಜಿಲ್ಲೆಸುದ್ದಿ

ಪಂಚಮಸಾಲಿ ಮೀಸಲಾತಿ ಹೋರಾಟ ; ಲಾಠಿ ಚಾರ್ಜ್,ಕಲ್ಲು ತೂರಾಟ…

ಬೆಳಗಾವಿ: 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಆದರೂ ಸಹ ಪ್ರತಿಭಟನೆಕಾರರು ಬ್ಯಾರಿಕೇಡ್​ಗಳನ್ನು ತಳ್ಳಿ ಸುವರ್ಣ ಸೌಧಕ್ಕೆನೂಕು ನುಗ್ಗಲು ಯತ್ನಿಸಿದ್ದಾರೆ. ಇದರಿಂದ ಸುವರ್ಣಸೌಧ ಮುಂಭಾಗ ಭಾರೀ ಹೈಡ್ರಾಮಾ ಸೃಷ್ಟಿಯಾಗಿದ್ದು, ಪೊಲೀಸರಿಗೆ ಹಾಗೂ ಪ್ರತಿಭಟನೆಕಾರರಿಗೆ ಗಾಯಗಳಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಪೊಲೀಸರು ಮತ್ತು ಪಂಚಮಸಾಲಿ ಸಮಾಜದ ಜನರ ನಡುವೆ ತಳ್ಳಾಟ ನೂಕಾಟ ನಡೆದಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಹೀಗಾಗಿ ಆಕ್ರೋಶಗೊಂಡ ಹೋರಾಟಗಾರರು ಸಹ ಪೊಲೀಸರ ಜತೆ ವಾಗ್ದಾದ ನಡೆಸಿದ್ದಾರೆ. ಅಲ್ಲದೇ ಬ್ಯಾರಿಕೇಡ್​ಗಳನ್ನು ಕಿತ್ತೆಸೆದು ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸುತ್ತಿದ್ದಾರೆ. ಇನ್ನು ಘಟನೆಯಲ್ಲಿ ಪೊಲೀಸರು ಹಾಗೂ ಹೋರಾಟಗಾರರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

 

ಕಲ್ಲು ತೂರಾಟದಲ್ಲಿ ಇಪ್ಪತ್ತಕ್ಕೂ ಅಧಿಕ ಪೊಲೀಸರಿಗೆ ಗಾಯ‌ಗಳಾಗಿದ್ದರೆ, ಐವತ್ತಕ್ಕೂ ಅಧಿಕ ಹೋರಾಟಗಾರರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಕಿತ್ತೆಸೆದು ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದವರ ಮೇಲೂ ಸಹ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಅವರು ಲಾಠಿಚಾರ್ಜ್ ಮಾಡಿದ್ದಾರೆ.

ಪೊಲೀಸರ ಲಾಠಿಚಾರ್ಜ್​ ಖಂಡಿಸಿ ಪ್ರತಿಭಟನೆಕಾರರ ಆಕ್ರೋಶಗೊಂಡಿದ್ದು, ಪೊಲೀಸರ ವಾಹನ ಹಾಗೂ ರಾಜಕಾರಣಿಗಳ ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

Comments (0)

Your email address will not be published. Required fields are marked *

Back to top button