ಯಣನಗರಿ ಪ್ಯಾರಿಸ್‌ನಲ್ಲೀಗ ಒಲಿಂಪಿಕ್ಸ್ ಕ್ರೀಡಾಕೂಟ (Olympics 2024) ಸಂಭ್ರಮ ಮನೆ ಮಾಡಿದೆ. ಅದ್ಧೂರಿ ಕ್ರೀಡೋತ್ಸವ ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾದು ಕುಳಿತಿದೆ. ದಾಖಲೆ ಸಂಖ್ಯೆಯ ಕ್ರೀಡಾಪಟುಗಳು ಅಖಾಡದಲ್ಲಿ ಸೆಣಸಲು ತೊಡೆ ತಟ್ಟಿ ನಿಂತಿದ್ದಾರೆ. ಒಲಿಂಪಿಕ್ಸ್ ವೇದಿಕೆಯಲ್ಲಿ ವಿಶ್ವದ ಅಗ್ರ ಕ್ರೀಡಾಪಟುಗಳು ಒಬ್ಬರನ್ನೊಬ್ಬರು ಸೆಣಸುವುದನ್ನು ಇಡೀ ವಿಶ್ವವೇ ಉಸಿರು ಬಿಗಿಹಿಡಿದು ನೋಡುತ್ತಿರುತ್ತದೆ. ಇಲ್ಲಿ ಪದಕ ಗಳಿಸುವ ಹುರಿಯಾಳುಗಳ ಸಾಧನೆ, ಮಾನವೀಯತೆಗೆ ಸವಾಲೊಡ್ಡುವ ದೃಶ್ಯಗಳೂ ಹೆಮ್ಮೆಯಿಂದ ಎದೆ ಉಬ್ಬಿಸುವಂತೆ ಮಾಡುತ್ತದೆ. ಇದು ಕೇವಲ ಒಲಿಂಪಿಕ್ಸ್ ಅಲ್ಲ, ಇಡೀ ವಿಶ್ವವೇ ಆಚರಿಸುವ ಅದ್ಧೂರಿ ಕ್ರೀಡಾಜಾತ್ರೆ. ಕಣದಲ್ಲಿರುವ ವಿಶ್ವಚೇತನಗಳನ್ನ ತಟ್ಟಿ ಎಬ್ಬಿಸಿ, ದಾಖಲೆ ಮುಟ್ಟುವಂತೆ ಪ್ರೇರೇಪಿಸುವ ಅದ್ಬುತ ಅಂಗಳವೂ ಇದಾಗಿದೆ. ಅದರಲ್ಲೂ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಅತ್ಯಂತ ವಿಶೇಷವೆಂದೇ ಹೇಳಬಹುದು. ಏಕೆಂದರೆ 1900ರಲ್ಲಿ ಆಧುನಿಕ ಯುಗದ ಒಲಿಂಪಿಕ್ಸ್ ಕೂಟಕ್ಕೆ ನಾಂದಿ ಹಾಡಿದ್ದ ಪ್ಯಾರಿಸ್‌ನಲ್ಲಿ (Paris) ಈಗ 3ನೇ ಐತಿಹಾಸಿಕ ಒಲಿಂಪಿಕ್ಸ್ ಮೇಳ ನಡೆಯುತ್ತಿರುವುದು ಮತ್ತೊಂದು ವಿಶೇಷ. ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ವಿಶ್ವದ ಎಲ್ಲಾ ಕ್ರೀಡಾಪಟುಗಳು (Athletes) ಈಗಾಗಲೇ ಪ್ಯಾರಿಸ್ ಅಂಗಳ ತಲುಪಿದ್ದು, ಅಧಿಕೃತ ಚಾಲನೆ ದೊರೆಯಲಿದೆ. ಭಾರತದಿಂದ ಈ ಬಾರಿ 117 ಕ್ರೀಡಾಪಟುಗಳು ಹಾಗೂ 140 ಮಂದಿ ಕ್ರೀಡಾ ಸಿಬ್ಬಂದಿ ಪಾಲ್ಗೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಒಲಿಂಪಿಕ್ಸ್ ಜಾತ್ರೆಯ ಇತಿಹಾಸ ತಿಳಿಯುವುದು ಅತೀ ಮುಖ್ಯ. ಮೊದಲ ಒಲಿಂಪಿಕ್ಸ್ ಯಾವಾಗ ಶುರುವಾಯ್ತು ಅಂದ್ರೆ ಎಲ್ಲರೂ ಹೇಳೋದು 1896ರಲ್ಲಿ ಗ್ರೀಸ್‌ನ ರಾಜಧಾನಿ ಅಥೆನ್ಸ್ ನಗರದಲ್ಲಿ ಶುರುವಾಯಿತು ಎಂದು. ಆದ್ರೆ ಕ್ರೀಸ್ತಪೂರ್ವದಲ್ಲೇ ಒಲಿಂಪಿಕ್ಸ್ ಶುರುವಾಗಿತ್ತು ಎಂಬುದಕ್ಕೆ ಪುರಾವೆಗಳು ಇವೆ.