Thursday, November 20, 2025
19.5 C
Bengaluru
Google search engine
LIVE
ಮನೆUncategorizedಚಿನ್ನಕ್ಕೆ ಗುರಿಯಿಟ್ಟ ಶೂಟರ್‌ – ಚೀನಾಗೆ ಮೊದಲ ಚಿನ್ನದ ಪದಕ

ಚಿನ್ನಕ್ಕೆ ಗುರಿಯಿಟ್ಟ ಶೂಟರ್‌ – ಚೀನಾಗೆ ಮೊದಲ ಚಿನ್ನದ ಪದಕ

ಪ್ಯಾರಿಸ್‌: 2024ರ ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟ ಅದ್ಧೂರಿಯಾಗಿ ಆರಂಭವಾಗಿದ್ದು, ಮೊದಲ ದಿನವೇ ಚೀನಾ ಚಿನ್ನದ ಪದಕ ಗೆಲ್ಲುವ ಮೂಲಕ ಗಮನ ಸೆಳೆದಿದೆ.

ಶನಿವಾರ (ಜು.27) ನಡೆದ 10 ಮೀಟರ್‌ ಏರ್‌ ರೈಫಲ್‌ ಮಿಶ್ರ ತಂಡಗಳ ಸ್ಪರ್ಧೆಯಲ್ಲಿ ಚೀನಾದ ಶೂಟರ್‌ಗಳಾದ ಹುವಾಂಗ್‌ ಯುಟಿಂಗ್‌ ಮತ್ತು ಶೆಂಗ್‌ ಲಿಹಾವೊ ಜೋಡಿ ಪ್ರಥಮ ಸ್ಥಾನ ಪಡೆಯುವ ಮೂಲಕ ಚೀನಾಗೆ ಮೊದಲ ಚಿನ್ನದ ಪದಕ ತಂದುಕೊಟ್ಟರು. ಇದು ಪ್ರಸಕ್ತ ಕ್ರೀಡಾಕೂಟದಲ್ಲಿ ಗೆದ್ದ ಮೊದಲ ಚಿನ್ನದ ಪದಕವೂ ಆಗಿದೆ.

ಏರ್‌ ರೈಫಲ್‌ ಸ್ಪರ್ಧೆಯ ಫೈನಲ್‌ ರೌಂಡ್‌ನಲ್ಲಿ ದಕ್ಷಿಣ ಕೊರಿಯಾದ ಲಿಹಾವೊ ಶೆಂಗ್‌ನ ಜಿಹ್ಯೆನ್ ಕೆಯುಮ್ – ಹಜುನ್ ಪಾರ್ಕ್ ಜೋಡಿಯನ್ನು 16-12 ಅಂತರದಲ್ಲಿ ಸೋಲಿಸುವ ಮೂಲಕ ಹುವಾಂಗ್‌ ಮತ್ತು ಶೆಂಗ್‌ ಜೋಡಿ ಚಿನ್ನದ ಪದಕಕ್ಕೆ ಕೊರಳೊಡ್ಡಿತು. ಇದಕ್ಕೂ ಮುನ್ನ 10 ಮೀಟರ್‌ ಮಿಶ್ರ ತಂಡಗಳ ಏರ್‌ ರೈಫಲ್‌ ಸ್ಪರ್ಧೆಯಲ್ಲಿ ಕಝಕಿಸ್ತಾನದ ಅಲೆಕ್ಸಾಂಡ್ರಾಲೆ ಮತ್ತು ಇಸ್ಲಾಂ ಸತ್ಪಯೇವ್‌ ಜೋಡಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದರು. ಇದು ಈ ಟೂರ್ನಿಯ ಮೊದಲ ಪದಕವಾಗಿದೆ.

ಪ್ಯಾರಿಸ್‌ನ ಸೆನ್ ನದಿಯ ಮೇಲೆ ಭಾರತೀಯ ಕಾಲಮಾನ ಶುಕ್ರವಾರ ರಾತ್ರಿ 11 ಗಂಟೆಗೆ 2024ರ ಒಲಿಂಪಿಕ್ಸ್‌ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿತ್ತು. ಕೆಲ ತಂಡಗಳಿಗೆ ಪ್ರತ್ಯೇಕ ಬೋಟ್ ಸಿಕ್ಕರೆ, 3-4 ತಂಡಗಳನ್ನು ಒಟ್ಟಿಗೆ ಸೇರಿಸಿ ಬೋಟ್‌ನಲ್ಲಿ ಪಥ ಸಂಚಲನ ನಡೆಸಿದರು. ಪಥ ಸಂಚಲನದ ವೇಳೆ ತುಂತುರು ಮಳೆ ಬಂದರೂ ಸ್ಪರ್ಧಿಗಳು ಉತ್ಸಾಹದಿಂದ ಅಭಿಮಾನಿಗಳತ್ತ ಕೈ ಬೀಸುತ್ತಿದ್ದರು. ಸೀನ್‌ ನದಿಯ ಆಸ್ಟರ್‌ಲಿಟ್ಜ್‌ ಬ್ರಿಡ್ಜ್‌ನ ಬಳಿ ಆರಂಭಗೊಂಡ ಪಥ ಸಂಚಲನ 6 ಕಿ.ಮೀ ದೂರದಲ್ಲಿರುವ ಐಫಲ್‌ ಟವರ್‌ ಬಳಿ ಮುಕ್ತಾಯಗೊಂಡಿತು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments