ಸುದ್ದಿ

ಸಂಸದನ ಅಶ್ಲೀಲ ವಿಡಿಯೋ ವೈರಲ್: ಅವಳ್ಯಾರು..ಅಸಲಿಯತ್ತೇನು?

ಉತ್ತರ ಪ್ರದೇಶದ ಬಾರಾಬಂಕಿ ಕ್ಷೇತ್ರದ ಬಿಜೆಪಿ ಸಂಸದ ಉಪೇಂದ್ರ ಸಿಂಗ್ ರಾವತ್ ಅವರ ಹೆಸರು 2024ರ ಲೋಕಸಭೆ ಚುನಾವಣೆಯ ಮೊದಲ ಪಟ್ಟಿಯಲ್ಲಿ ಪ್ರಕಟಗೊಂಡ ಬಳಿಕ, ಅವರದ್ದು ಎನ್ನಲಾದ ಅಶ್ಲೀಲ ವೀಡಿಯೊ ವೈರಲ್ ಆಗಿದೆ. ಈ ಬಗ್ಗೆ ಅವರ ಆಪ್ತ ಸಹಾಯಕ ದಿನೇಶ್ ರಾವತ್ ಅವರು ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ವೈರಲ್ ಆಗುತ್ತಿರುವ ವೀಡಿಯೊವನ್ನು ಮಾರ್ಫ್ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಸಂಸದರ ರಾಜಕೀಯ ಏಳಿಗೆ ಸಹಿಸದವರು, ಅವರ ವ್ಯಕ್ತಿತ್ವಕ್ಕೆ ಕಳಂಕ ತರಲು ಸಂಚು ರೂಪಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಂಸದರ ವರ್ಚಸ್ಸು ಹಾಳು ಮಾಡಲು ಅಂತರ್ಜಾಲ ಮಾಧ್ಯಮಗಳಲ್ಲಿ ವೀಡಿಯೋ ಪ್ರಸಾರ ಮಾಡಲಾಗುತ್ತಿದೆ ಎಂದು ದಿನೇಶ್ ಚಂದ್ರ ರಾವತ್ ಅವರು ಪೊಲೀಸರಿಗೆ ನೀಡಿರುವ ಲಿಖಿತ ದೂರಿನಲ್ಲಿ ತಿಳಿಸಿದ್ದಾರೆ. ಈ ವಿಡಿಯೋವನ್ನು ಹರಿಬಿಡುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಮನವಿ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button