Tuesday, June 24, 2025
25.9 C
Bengaluru
Google search engine
LIVE
ಮನೆ#Exclusive NewsTop Newsಸ್ಪೈಸ್ ಜೆಟ್ ಏರ್‌ಲೈನ್ಸ್ ಎಡವಟ್ಟು- ಪ್ರಯಾಣಿಕರು 12 ಗಂಟೆ ವಿಮಾನದಲ್ಲೇ ಲಾಕ್

ಸ್ಪೈಸ್ ಜೆಟ್ ಏರ್‌ಲೈನ್ಸ್ ಎಡವಟ್ಟು- ಪ್ರಯಾಣಿಕರು 12 ಗಂಟೆ ವಿಮಾನದಲ್ಲೇ ಲಾಕ್

ಬೆಂಗಳೂರು: ಸ್ಪೈಸ್ ಜೆಟ್ ಏರ್‌ಲೈನ್ಸ್ ಸಿಬ್ಬಂದಿಯ ಎಡವಟ್ಟಿನಿಂದಾಗಿ ಟೇಕಾಫ್ ಆಗದ ವಿಮಾನದಲ್ಲೇ ಪ್ರಯಾಣಿಕರು ಲಾಕ್ ಆದ ಪ್ರಸಂಗ ನಡೆದಿದೆ.

ಫ್ಲೈಟ್ ನಲ್ಲೇ 100ಕ್ಕೂ ಹೆಚ್ಚು ಪ್ರಯಾಣಿಕರು ಲಾಕ್ ಆಗಿದ್ದಾರೆ. ಹೀಗಾಗಿ ಪ್ರಯಾಣಿಕರು ಆತಂಕಗೊಂಡಿದ್ದು, ಹೈಜಾಕ್ ಮಾಡಿ ಕೂರಿಸಿದ್ದಾರೆಂದು ಆರೋಪಿಸಿದರು. ಶುಕ್ರವಾರ ಸಂಜೆ 7 ಗಂಟೆಯಿಂದ ಪ್ರಯಾಣಿಕರು ಫ್ಲೈಟ್‍ನಲ್ಲೆ ಕುಳಿತಿದ್ದರು. ವಿಮಾನದಲ್ಲಿ ಊಟ, ನಿದ್ದೆ ಇಲ್ಲದೇ ಪ್ರಯಾಣಿಕರ ಪರದಾಟ ಅನುಭವಿಸಿದರು.

SG8151 ಸ್ಪೈಸ್ ಜೆಟ್ ದೆಹಲಿಯಿಂದ ಬೆಂಗಳೂರಿಗೆ ಬರಬೇಕಿತ್ತು. ಟರ್ಮಿನಲ್ 3 ರಿಂದ ರಾತ್ರಿ 7.40 ಕ್ಕೆ ಟೆಕಾಫ್ ಅಗಬೇಕಿತ್ತು. ಆದರೆ ವಿಮಾನ ಟೆಕಾಫ್ ಆಗದೇ ರನ್ ವೇ ನಲ್ಲೇ ನಿಲ್ಲಿಸಿಕೊಳ್ಳಲಾಗಿತ್ತು. ಇದಕ್ಕೆ ಸ್ಪೈಸ್ ಜೆಟ್ ಕಾರಣ ಕೂಡ ಕೊಡದೇ ಇರುವುದರಿಂದ ಪ್ರಯಾಣಿಕರು ವಿಮಾನದೊಳಗೆ ಕುಳಿತು ಪ್ರತಿಭಟನೆ ನಡೆಸಿದರು.

ಕೊನೆಗೂ ಇದೀಗ ವಿಮಾನ ಟೇಕಾಫ್‌ ಆಗಿದ್ದು, ಇಂದು 9:10ಕ್ಕೆ ವಿಮಾನ ಬೆಂಗಳೂರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ತಾಂತ್ರಿಕ ದೋಷದಿಂದ ವಿಮಾನ ನಿಂತಿರುವುದಾಗಿ ಮಾಹಿತಿ ಲಭಿಸಿದೆ.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments