Tuesday, June 24, 2025
25.1 C
Bengaluru
Google search engine
LIVE
ಮನೆ#Exclusive NewsTop Newsಜೈಲು ಸೇರಿದ 72 ದಿನಗಳ ಬಳಿಕ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ; ಆಗಸ್ಟ್ 22ಕ್ಕೆ ವಿಚಾರಣೆ

ಜೈಲು ಸೇರಿದ 72 ದಿನಗಳ ಬಳಿಕ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ; ಆಗಸ್ಟ್ 22ಕ್ಕೆ ವಿಚಾರಣೆ

ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟಿ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಅವರ ಜೈಲು ವಾಸ ಆರಂಭವಾಗಿ ಈಗಾಗಲೇ 72 ದಿನಗಳು ಕಳೆದಿವೆ. ಈಗ ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆತಂದು ಚಿತ್ರಹಿಂಸೆ ನೀಡಿ ಸಾಯಿಸಲಾಗಿತ್ತು. ಈ ಕೇಸ್​ನಲ್ಲಿ ಪವಿತ್ರ ಎ1 ಆಗಿದ್ದಾರೆ. ನಟ ದರ್ಶನ್​ ಎ2 ಆಗಿದ್ದಾರೆ. ಈ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಜಾಮೀನು ಪಡೆಯುವ ಸಲುವಾಗಿ ಪವಿತ್ರಾ ಗೌಡ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಜಾಮೀನು ನೀಡುವಂತೆ ಮನವಿ ಮಾಡಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್​ಗೆ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ನಡೆಸಿದ ಬಳಿಕ ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ನೋಟಿಸ್ ನೀಡಿದೆ. ಸಿಸಿಹೆಚ್ 57 ಕೋರ್ಟ್ ಆಗಸ್ಟ್ 22ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಪವಿತ್ರಾ ಗೌಡ ಜೊತೆ ಮತ್ತೊಬ್ಬ ಆರೋಪಿ ಅನುಕುಮಾರ್ ಕೂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು ಪೊಲೀಸರು ಈ ಪ್ರಕರಣದಲ್ಲಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಚಾರ್ಜ್​ ಶೀಟ್​ ಸಲ್ಲಿಸಲು ತಯಾರಿ ಮಾಡಿಕೊಂಡಿದ್ದಾರೆ. ಚಾರ್ಜ್​ಶೀಟ್​ ಸಲ್ಲಿಸುವ ವೇಳೆಗೆ ಸರಿಯಾಗಿ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಸಿಸಿಎಚ್ 57ರ ನ್ಯಾಯಾಲಯದಲ್ಲಿ ವಕೀಲೆ ರೆನಿ ಸೆಬಾಸ್ಟಿನ್ ಅವರಿಂದ ಪವಿತ್ರಾ ಗೌಡ ಪರ ಜಾಮೀನಿಗೆ ಅರ್ಜಿ ಸಲ್ಲಿಕೆ ಆಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments