Top Newsರಾಜ್ಯಸುದ್ದಿ

6 ತಿಂಗಳ ಬಳಿಕ ಇಂದು ಪವಿತ್ರಗೌಡ ರಿಲೀಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ.

6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು.

ಇಂದು ಬೆಳಗ್ಗೆ ಬಿಡುಗಡೆಯ ಎಲ್ಲಾ ಪ್ರಕ್ರಿಯೆಗಳು ಮುಗಿಯಲಿದೆ. ಪರಪ್ಪನ ಅಗ್ರಹಾರದಿಂದ ಪವಿತ್ರಾ, ಅನುಕುಮಾರ್, ಪ್ರದೂಶ್ ಬಿಡುಗಡೆಯಾದರೆ ಶಿವಮೊಗ್ಗ ಜೈಲಿನಿಂದ ಜಗದೀಶ್, ಲಕ್ಷಣ್, ಕಲಬುರಗಿಯಿಂದ ನಾಗರಾಜ್ ರಿಲೀಸ್‌ ಆಗಲಿದ್ದಾರೆ. ಇಂದು ಮಧ್ಯಾಹ್ನ ಹೊತ್ತಿಗೆ ಎಲ್ಲಾ ಆರೋಪಿಗಳು ಜೈಲಿನಿಂದ ಹೊರಬರಲಿದ್ದಾರೆ.

ಆರೋಪಿಗಳನ್ನು ಬಂಧಿಸಿದ ನಂತರ ಪ್ರಾಸಿಕ್ಯೂಷನ್‌ ತಕ್ಷಣವೇ ಇವರನ್ನು ಯಾಕೆ ಬಂದಿಸಿದ್ದೇವೆ ಎನ್ನುವುದಕ್ಕೆ ಸರಿಯಾದ ಕಾರಣ ನೀಡಿಲ್ಲ. ಹೀಗಾಗಿ ಕಾನೂನಿನ ಈ ಲೋಪದ ಆಧಾರದಡಿ ಎಲ್ಲರ ಜಾಮೀನು ಅರ್ಜಿಗಳನ್ನು ಪುರಸ್ಕರಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ 68 ಪುಟಗಳ ತೀರ್ಪಿನಲ್ಲಿ ಹೇಳಿತ್ತು.

ಪ್ರಕರಣದ ಮೊದಲ ಆರೋಪಿ ಆಗಿರುವ ಪವಿತ್ರಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಜೂನ್ 11 ರಂದು ಅರೆಸ್ಟ್​ ಆಗಿದ್ದ ಪವಿತ್ರಾಗೌಡ, ಜೂನ್ 20 ರಂದು ಜೈಲು ಸೇರಿದ್ದರು. ಬರೋಬ್ಬರಿ ಆರು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ.

Comments (0)

Your email address will not be published. Required fields are marked *

Back to top button