ಕ್ರೈಂ ಸ್ಟೋರಿ

ರೇಣುಕಾಸ್ವಾಮಿ ಕೊಲೆ ಪ್ರಕರಣ – ಇಂದು ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ!

Renukaswamy murder case - Pavitra Gowda bail application hearing today!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೊಸ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದೆ.

ಸೌಲಭ್ಯ ಹಾಗೂ ಸ್ವಚ್ಛತೆ ಇರುವ ಬ್ಯಾರಕ್‌ಗೆ ವರ್ಗಾವಣೆ ಮಾಡುವಂತೆ ಪವಿತ್ರಾ ಗೌಡ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಗಣಿಸಿದ ಕೋರ್ಟ್, ಸೌಲಭ್ಯ ಇರುವ ಬ್ಯಾರಕ್‌ಗೆ ವರ್ಗಾವಣೆ ಮಾಡುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿತ್ತು. ಜೈಲು ಮ್ಯಾನ್ಯುವಲ್ ಪ್ರಕಾರ ಇದೀಗ ಐವರು ಸಜಾಬಂಧಿಗಳು ಇರುವ ಬ್ಯಾರಕ್‌ಗೆ ಪವಿತ್ರಾ ಗೌಡ ಅವರನ್ನು ಶಿಫ್ಟ್ ಮಾಡಲಾಗಿದೆ.

ಇನ್ನು ಪವಿತ್ರಾ ಗೌಡಗೆ ಇಂದು ಜಾಮೀನು ಸಿಗುತ್ತಾ ಎಂಬ ಕುತೂಹಲ ಮೂಡಿದೆ. ಸಿಸಿಎಚ್ 59ರ ಕೋರ್ಟ್‌ನಲ್ಲಿ ಇಂದು ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. 

ಸುಪ್ರೀಂ ಕೋರ್ಟ್ ಆದೇಶದ ಬಳಿಕ ಇದೇ ಮೊದಲ ಬಾರಿಗೆ ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾ ಗೌಡ ಜೊತೆಗೆ ಮತ್ತಿಬ್ಬರ ಆರೋಪಿಗಳ ಜಾಮೀನು ಅರ್ಜಿಯೂ ವಿಚಾರಣೆಗೆ ಬರಲಿದೆ.

Comments (0)

Your email address will not be published. Required fields are marked *

Back to top button