#Exclusive NewsTop News

PCB – BCCI ನಡುವೆ ಒಪ್ಪಂದ: ಚಾಂಪಿಯನ್ಸ್​​ ಟ್ರೋಫಿ ನಡೆಯುವುದೆಲ್ಲಿ ಎಂಬುದು ಬಹಿರಂಗ

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಢಗಳು ಕಣಕ್ಕಿಳಿಯಲಿದೆ. ಈ ತಂಡಗಳನ್ನು ಎರಡು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಮೊದಲ ಸುತ್ತಿನಲ್ಲಿ ಆಯಾ ಗ್ರೂಪ್​ಗಳಲ್ಲಿನ ತಂಡಗಳ ನಡುವೆ ಪಂದ್ಯಗಳು ನಡೆಯಲಿದೆ. ಇಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಒಂದೇ ಗ್ರೂಪ್​ನಲ್ಲಿದ್ದು, ಅದರಂತೆ ಮೊದಲ ಸುತ್ತಿನಲ್ಲೇ ಉಭಯ ತಂಡಗಳು ಮುಖಾಮುಖಿಯಾಗಲಿದೆ.

2025ರ ಚಾಂಪಿಯನ್ಸ್ ಟ್ರೋಫಿ ಚರ್ಚೆ ಮುಂದುವರೆದಿದೆ. ಒಂದೆಡೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲ್ಲ ಎಂದರೆ, ಮತ್ತೊಂದೆಡೆ ಭಾರತೀಯ ಕ್ರಿಕೆಟ್ ಮಂಡಳಿ ಪಾಕ್​​​ನಲ್ಲಿ ಟೂರ್ನಿ ಆಡಲು ನಿರಾಕರಿಸಿದೆ. ಹೀಗಾಗಿಯೇ ಮುಂಬರುವ ಚಾಂಪಿಯನ್ಸ್ ಟ್ರೋಫಿ ಎಲ್ಲಿ ನಡೆಯಲಿದೆ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಈ ಪ್ರಶ್ನೆಗೆ ಇದೀಗ ಪಾಕಿಸ್ತಾನ್ ತಂಡದ ಮಾಜಿ ಆಟಗಾರ ರಶೀದ್ ಲತೀಫ್ ಉತ್ತರ ನೀಡಿದ್ದಾರೆ

ಪಾಕಿಸ್ತಾನದ ಮಾಜಿ ನಾಯಕ ರಶೀದ್ ಲತೀಫ್ ಪ್ರಕಾರ, ಚಾಂಪಿಯನ್ಸ್ ಟ್ರೋಫಿ 2025 ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುತ್ತದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನಡುವೆ ಈಗಾಗಲೇ ಒಪ್ಪಂದವಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಒಪ್ಪಂದದ ಪ್ರಕಾರ, ಪಾಕಿಸ್ತಾನದಲ್ಲೇ ಚಾಂಪಿಯನ್ಸ್​ ಟ್ರೋಫಿ ನಡೆಯಲಿದೆ. ಆದರೆ ಭಾರತದ ಪಂದ್ಯಗಳನ್ನು ದುಬೈನಲ್ಲಿ ಆಡಲಾಗುತ್ತದೆ. ಅದರಂತೆ ಟೀಮ್ ಇಂಡಿಯಾದ ಎಲ್ಲಾ ಪಂದ್ಯಗಳಿಗೆ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ ಎಂದು ಅವರು ಖಾಸಗಿ ಚಾನೆಲ್​ ಮೂಲಕ ಬಹಿರಂಗಪಡಿಸಿದ್ದಾರೆ.

ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯು ಈಗಾಗಲೇ ಹೈಬ್ರಿಡ್ ಮಾದರಿಗೆ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ಹಕ್ಕು ಕೈ ತಪ್ಪದಂತೆ ನೋಡಿಕೊಂಡಿದೆ. ಹೀಗಾಗಿ ಭಾರತ ತಂಡ ಪಾಕ್​​ಗೆ ಬಂದು ಆಡುವುದಿಲ್ಲ. ಬದಲಾಗಿ ದುಬೈಗೆ ತೆರಳಲಿದೆ. ಇನ್ನು ಭಾರತದ ವಿರುದ್ಧದ ಪಂದ್ಯಗಳಿಗಾಗಿ ಪಾಕಿಸ್ತಾನ್ ಸೇರಿದಂತೆ ಕೆಲ ತಂಡಗಳು ದುಬೈಗೆ ತೆರಳಲಿದೆ ಎಂದು ರಶೀದ್ ಲತೀಫ್ ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button