ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಐದು ಗಂಡು ನವಿಲು ಹಾಗೂ 14 ಹೆಣ್ಣು ನವಿಲುಗಳು ಮೃತಪಟ್ಟಿವೆ.. ಕೆರೆ ಕೋಡಿ ನೀರು ಹರಿಯುವ ಪಕ್ಕದ ಜಮೀನುಗಳಲ್ಲಿ ನವಿಲುಗಳ ಕಳೇಬರ ಪತ್ತೆಯಾಗಿದ್ದು, ರಾತ್ರಿ ನವಿಲುಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅರಣ್ಯಧಿಕಾರಿಗಳು ಹಾಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದ್ದು, ವರದಿ ಬಂದ ಬಳಿಕ ಸಾವಿಗೆ ಕಾರಣವೇನು ಎಂಬುವುದು ತಿಳಿಯಲಿದೆ. ಇನ್ನು ನವಿಲುಗಳ ಸಾವಿಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಕ್ರಿಮಿನಾಶಕ ಸಿಂಪಡಣೆ ಮಾಡಿರುವ ಬೆಳೆಗಳನ್ನು ಸೇವಿಸಿ ಮೃತಪಟ್ಟಿರಬಹುದು ಅಥವಾ ಯಾರಾದರೂ ಏನಾದರೂ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.


