Thursday, November 20, 2025
27.5 C
Bengaluru
Google search engine
LIVE
ಮನೆರಾಜಕೀಯರಸ್ತೆಯಲ್ಲಿ ನಮಾಜ್​​​​​ ಮಾಡಲು ಅನುಮತಿ ಕಡ್ಡಾಯ: ಪ್ರಿಯಾಂಕ್​ ಖರ್ಗೆ

ರಸ್ತೆಯಲ್ಲಿ ನಮಾಜ್​​​​​ ಮಾಡಲು ಅನುಮತಿ ಕಡ್ಡಾಯ: ಪ್ರಿಯಾಂಕ್​ ಖರ್ಗೆ

ಬೆಂಗಳೂರು: ರಸ್ತೆಯಲ್ಲಿ ನಮಾಜ್​ ಮಾಡಲು ಅನುಮತಿ ಪಡೆಯುವುದು ಕಡ್ಡಾಯ ಎಂದು ಸಚಿವ ಪ್ರಿಯಾಂಕ್​​ ಖರ್ಗೆ ಹೇಳಿದ್ದಾರೆ.. ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​​​​ ರಸ್ತೆಯಲ್ಲಿ ಪೂರ್ವಾನುಮತಿ ಇಲ್ಲದೇ ನಮಾಜ್ ಮಾಡಲು ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಪತ್ರ ಬರೆದಿದ್ದ ಕುರಿತು ಪ್ರತಿಕ್ರಿಯಿಸಿದ ಖರ್ಗೆ, ರಸ್ತೆಯಲ್ಲಿ ಪ್ರಾರ್ಥನೆ ಮಾಡಲು ಅರ್ಜಿ ಹಾಕಿ ಅನುಮತಿ ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ..

ಯತ್ನಾಳ್ ಅವರು ಇಂಗ್ಲಿಷ್‌ನಲ್ಲಿ ಪತ್ರ ಬರೆದಿರುವುದನ್ನು ಟೀಕಿಸಿದ ಖರ್ಗೆ, ಯಾರಿಗೆ ಸಂದೇಶ ಕೊಡಲು ಇಂಗ್ಲಿಷ್‌ನಲ್ಲಿ ಪತ್ರ ಬರೆದಿದ್ದಾರೆಯೋ ಗೊತ್ತಿಲ್ಲ. ಮುಖ್ಯಮಂತ್ರಿಗೆ ಗೊತ್ತಾಗಲಿ ಎಂದೋ, ಅಮಿತ್ ಶಾ ಅವರಿಗೆ ಗೊತ್ತಾಗಲಿ ಎಂದೋ ಅಥವಾ ಬೇರೆ ಯಾರಿಗೆ ಗೊತ್ತಾಗಲಿ ಎಂದು ಬರೆದಿದ್ದಾರೊ ಗೊತ್ತಿಲ್ಲ ಎಂದು ಹೇಳಿದರು.

ನಮ್ಮದು ಒಕ್ಕೂಟ ವ್ಯವಸ್ಥೆ, ಕೇಂದ್ರ ಸರ್ಕಾರದ ಎಲ್ಲ ನಿಯಮಗಳನ್ನು ನಾವು ಅಳವಡಿಸಿಕೊಳ್ಳಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರಿ ನೌಕರರು ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎಂದು ಕಾನೂನು ತಿದ್ದುಪಡಿ ತಂದಿದೆ. ಆದರೆ ರಾಜ್ಯ ಸರ್ಕಾರಿ ನೌಕರರು ಆರ್‌ಎಸ್‌ಎಸ್ ಕಾರ್ಯಕ್ರಮ, ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ ಇಲ್ಲ ಎಂದರು.

ಪಥ ಸಂಚಲನ ಕುರಿತು ಮಾತನಾಡಿದ ಖರ್ಗೆ, ಪಥ ಸಂಚಲನ ನಡೆಸಲು ಹೈಕೋರ್ಟ್ ಆದೇಶದಂತೆ ಆರ್‌ಎಸ್‌ಎಸ್ ಹೊಸದಾಗಿ ಅರ್ಜಿ ಸಲ್ಲಿಸಲಿ. ಅನುಮತಿ ನೀಡುವ ಕುರಿತು ಜಿಲ್ಲಾಡಳಿತ ತೀರ್ಮಾನ ಮಾಡಲಿದೆ. ನಾವು ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments