ಜಿಲ್ಲೆರಾಜ್ಯ

ಪೆಟ್ರೋಲ್, ಡೀಸೆಲ್ ಶೀಘ್ರ ಇಳಿಕೆ10 ರೂಪಾಯಿ ಕಡಿಮೆ ಸಾಧ್ಯತೆ..!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಿಂದ ದೇಶದ ಜನರಿಗೆ ಸಿಹಿ ಸುದ್ದಿ ಸಿಗಲಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಭಾರಿ ಇಳಿಕೆಯಾಗುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿತಗೊಳಿಸಲು ಯೋಚಿಸುತ್ತಿದ್ದು, ಅತಿ ಶೀಘ್ರದಲ್ಲಿಯೇ ನೂತನ ದರಗಳು ಜಾರಿಯಾಗಬಹುದು. ಹೊಸ ವರ್ಷದ ಆರಂಭದಲ್ಲಿ ದರ ಕಡಿಮೆಯಾಗುವ ಸಾಧ್ಯತೆ ಇದೆ. 2024ರ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೂ ಮುನ್ನ ಇಂಧನ ದರಗಳು ಅಗ್ಗವಾಗುವ ನೀರಿಕ್ಷೆಯಿದೆ. ಸದ್ಯ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದು, ಶೀಘ್ರದಲ್ಲೇ ಕೇಂದ್ರ ಹಣಕಾಸು ಸಚಿವಾಲಯವು ಇಂಧನ ದರ ಕಡಿತವನ್ನು ಘೋಷಿಸಬಹುದು.

ಈ ಕುರಿತಂತೆ ಕೇಂದ್ರ ಸರ್ಕಾರ ತೈಲ ಕಂಪನಿಗಳ ಜೊತೆ ಮಾತುಕತೆ ನಡೆಸುತ್ತಿದ್ದು, ಅತಿ ಶೀಘ್ರದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ದರ ಕಡಿಮೆಯಾಗಬಹುದು. ಇನ್ನು ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ದರ ರೂ.10 ಕಡಿಮೆಯಾಗುವ ಸಾಧ್ಯತೆಯಿದೆ. ಮಾರುಕಟ್ಟೆಯ ಪರಿಸ್ಥಿತಿಗೆ ಅನುಗುಣವಾಗಿ, ದೇಶದಲ್ಲಿ ಇಂಧನ ಬೆಲೆಗಳನ್ನು ತೈಲ ಮಾರಾಟ ಕಂಪನಿಗಳು ನಿರ್ಧರಿಸಲಿದ್ದು, ಪ್ರತಿ ದಿನವು ಬೆಲೆಯನ್ನು ಪರಿಷ್ಕರಿಸಬಹುದು. ಆದರೆ, ಮೇ.22 2022ರ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಹೆಚ್ಚಿಸುವುದು ಅಥವಾ ಇಳಿಸುವುದು ಮಾಡಿಲ್ಲ.

ಕಳೆದ 3 ತಿಂಗಳಿನಿಂದ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 70-80 ಡಾಲರ್‌ ಇರುವುದರಿಂದ ಕೇಂದ್ರ ಸರ್ಕಾರ ಇಂಧನ ದರವನ್ನು ಇಳಿಸುವ ತೀರ್ಮಾನಕ್ಕೆ ಬಂದಿದೆ ಎಂದು ಮೂಲಗಳು ಹೇಳಿವೆ. ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್, ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ 2024ರ ಆರ್ಥಿಕ ವರ್ಷದಲ್ಲಿ ದೊಡ್ಡ ಲಾಭವನ್ನು ಮಾಡಿವೆ.

ರಾಜ್ಯದಲ್ಲಿ ಇಂಧನ ದರಗಳು ಎಷ್ಟಿದೆ ಎನ್ನುವುದನ್ನು ನೋಡುವುದಾದರೆ, ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ದರ ರೂ.101.94 ಇದ್ದು, ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.87.89 ಇದೆ. ಮೈಸೂರಿನಲ್ಲಿ 1 ಲೀ. ಪೆಟ್ರೋಲ್ ದರ ರೂ.101.63, ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.87.61 ಇದೆ. ದಾವಣಗೆರೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.103.85 ಮತ್ತು 1 ಲೀ. ಡೀಸೆಲ್ ದರ ರೂ.89.45 ಇದೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ದರ ರೂ.96.72 ಇದ್ದು, ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.89.62 ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.106.31 ಹಾಗೂ 1 ಲೀ. ಡೀಸೆಲ್ ದರ ರೂ.94.27 ಇದೆ. ಚೆನ್ನೈನಲ್ಲಿ 1 ಲೀಟರ್ ಪೆಟ್ರೋಲ್ ದರ ರೂ.102.63, ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.94.24 ಇದೆ.

Comments (0)

Your email address will not be published. Required fields are marked *

Back to top button