bengaluru
ಫೋಟೋ ತೆಗೆಯುವ ವಿಚಾರಕ್ಕೆ ಕಿರಿಕ್ – ವಿಧಾನಸೌಧ ಮುಂದೆಯೇ ನೇಪಾಳಿ ಹುಡುಗರ ಹೊಡೆದಾಟ!

ಬೆಂಗಳೂರು : ಫೋಟೋ ತೆಗೆಯುವಾಗ ಅಡ್ಡ ಬಂದಿದ್ದಕ್ಕೆ ನೇಪಾಳಿ ಹುಡುಗರ ಗುಂಪು ಹೊಡೆದಾಡಿಕೊಂಡಿರುವ ಘಟನೆ ವಿಧಾನಸೌಧದ ಮುಂಭಾಗದಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ ನಾಲ್ವರನ್ನು ವಿಧಾನಸೌಧ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈ ಘಟನೆ ಜೂನ್ 28ರ ಸಂಜೆ ವಿಧಾನಸೌಧದ ಹೊರಭಾಗದ ಪಾದಚಾರಿ ಮಾರ್ಗದಲ್ಲಿ ನಡೆದಿದ್ದು, ಎರಡು ಗುಂಪಿನ ಯುವಕರು ಪರಸ್ಪರ ಹೊಡೆದಾಡುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಘಟನೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. ಸ್ಥಳದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರು ತಕ್ಷಣವೇ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.
ಪೊಲೀಸರು ಗಲಾಟೆಯಲ್ಲಿ ಭಾಗಿಯಾಗಿದ್ದವರನ್ನು ವಶಕ್ಕೆ ಪಡೆದು, ಇನ್ಮುಂದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದರು.




