ಕಲಬುರಗಿ: ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಬೆಣ್ಣೆತೋರ ಡ್ಯಾಂ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರದ ಕುರಿಕೋಟ ಬಳಿ ಸಂಭವಿಸಿದೆ.
ಕಮಲಾಪುರ ತಾಲೂಕಿನ ಭೂಷಣಗಿ ಗ್ರಾಮದ ಸಾಕ್ಷಿ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಅಭಿಷೇಕ್ ಎಂಬಾತನ ಮೇಲೆ ಕಿರುಕುಳ ಆರೋಪ ಕೇಳಿಬಂದಿದೆ. ನಿನ್ನೆ ಮಧ್ಯಾಹ್ನ ಆಸ್ಪತ್ರೆ ಹೋಗುವುದಾಗಿ ಹೇಳಿ ಸಹೋದರಿ ಜೊತೆ ಬಂದಿದ್ದ ಸಾಕ್ಷಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವತಿ ಜೊತೆಗಿದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ. ಮದುವೆ ಮಾಡಿ ಕೊಡೋದಾಗಿ ಹೇಳಿದ್ರು ಕೂಡಾ ಹುಡುಗಿ ಜೊತೆಗಿರುವ ಫೋಟೋ ಹರಿಬಿಟ್ಟಿದ್ದು, ಇದರಿಂದ ಮನನೊಂದ ಯುವತಿ ಕುರಿಕೋಟ ಬ್ರಿಡ್ಜ್ ಮೇಲಿಂದ ಬೆಣ್ಣೆತೋರ ಡ್ಯಾಂ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇನ್ನು ಘಟನೆ ಸಂಬಂಧ ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿಗಾಗಿ ಶೋಧಕಾರ್ಯ ಮುಂದುವರಿದಿದೆ.


