Thursday, November 20, 2025
19.5 C
Bengaluru
Google search engine
LIVE
ಮನೆ#Exclusive Newsಸಿದ್ದರಾಮಯ್ಯರ 50 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಪ್ಲಾನ್..!

ಸಿದ್ದರಾಮಯ್ಯರ 50 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಪ್ಲಾನ್..!

ಬೆಂಗಳೂರು: ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸಲು ನಿರ್ಧರಿಸಲಾಗಿದೆ.

ಈ ಬಗ್ಗೆ ಸರ್ವೋದಯ ಮುಖಂಡ ಪಂಚಾಕ್ಷರಯ್ಯ ನೀಲಕಂಠಯ್ಯ ಗುಣಾಚಾರಿ ಎಂಬುವರು ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಂಡಾಡಿದರು. ಸಮಕಾಲೀನ ಸಮಾಜಕ್ಕೆ ಗಾಂಧೀ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಅಗತ್ಯವಿದೆ. ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧೀಜಿ ಕನಸಿನ ಭಾರತವನ್ನು ನನಸು ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ, ಸರ್ವೋದಯ ಸಮಾಜ ರಚನೆಯ ಹರಿಕಾರ ಎಂದು ಹೇಳಿದರು.

ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಂಡು ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ಅವರ ಪ್ರತಿಮೆ ನಿಲ್ಲಿಸಲು ಇದು ಸಕಾಲವಾಗಿದೆ. ಅದಕ್ಕಾಗಿ 1 ಕೋಟಿ ವೆಚ್ಚದಲ್ಲಿ ಯೋಜನೆ ಹಮ್ಮಿಕೊಳ್ಳಲಾಗಿದೆ. ಪ್ರತಿಮೆ ಪ್ರತಿಷ್ಠಾಪಿಸುವ ಸ್ಥಳ ಇನ್ನೂ ಅಂತಿಮಗೊಂಡಿಲ್ಲ, ಶೀಘ್ರವೇ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments