Top Newsರಾಜ್ಯಸುದ್ದಿ

S.L ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಕನ್ನಡ ಹಿರಿಯ ಸಾಹಿತಿ ಹಾಗೂ ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು 94ನೇ ವರ್ಷದಲ್ಲಿ ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

94 ವರ್ಷದ ಎಸ್​.ಎಲ್ ಭೈರಪ್ಪ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಎಸ್.ಎಲ್. ಭೈರಪ್ಪ ಅವರ ನಿಧನದಿಂದ ಬೇಸರವಾಗಿದೆ. ನಮ್ಮ ಆತ್ಮಸಾಕ್ಷಿಯನ್ನು ಕಲಕಿ, ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಒಬ್ಬ ಮಹಾನ್ ಧೀಮಂತ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಮೋದಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನು ಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಖ್ಯಾತ ಸಾಹಿತಿಗಳು, ಸರಸ್ವತಿ ಸಮ್ಮಾನ್, ಪದ್ಮಭೂಷಣ ಪುರಸ್ಕೃತರಾದ ಡಾ. ಎಸ್. ಎಲ್. ಭೈರಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ’ ಎಂದು ಬಿಜೆಪಿ ಪಕ್ಷವು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.

ಕನ್ನಡದ ಪ್ರಮುಖ ಕಾದಂಬರಿಕಾರರಾಗಿದ್ದ ಎಸ್.ಎಲ್. ಭೈರಪ್ಪ ಅವರು 25ಕ್ಕೂ ಅಧಿಕ ಕಾದಂಬರಿಗಳನ್ನು ರಚಿಸಿದ್ದಾರೆ. ಪದ್ಮಶ್ರೀ, ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

Comments (0)

Your email address will not be published. Required fields are marked *

Back to top button