ದೇಶ/ವಿದೇಶರಾಜಕೀಯಸುದ್ದಿ

ನವಿ ಮುಂಬೈ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಮುಂಬೈ: ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಉದ್ಘಾಟಿಸಿದರು.. 19,650 ಕೋಟಿ ರೂ.ವೆಚ್ಚದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾದ್ದು, ಈ ವಿಮಾನ ನಿಲ್ದಾಣವು ಮುಂಬೈ, ಪುಣೆ ಮತ್ತು ಕೊಂಕಣ ಪ್ರದೇಶಕ್ಕೆ ವ್ಯಾಪಾರ ಮತ್ತು ಪ್ರವಾಸೋದ್ಯಮ ಉತ್ತೇಜಿಸುವ ನಿರೀಕ್ಷೆಯಿದೆ.

ಉದ್ಘಾಟನೆಗೂ ಮೊದಲು ಮೋದಿ ವಿಮಾನ ನಿಲ್ದಾಣ ವೀಕ್ಷಣೆ ಮಾಡಿದರು. ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮಮೋಹನ್ ನಾಯ್ಡು, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಉಪಸ್ಥಿತರಿದ್ದರು.

1,160 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಹೊಸ ವಿಮಾನ ನಿಲ್ದಾಣವು ಭಾರತದ ವಾಯುಯಾನ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲು ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಭಾರೀ ಸಂಚಾರ ಹೊರೆಯನ್ನು ಕಡಿಮೆ ಮಾಡಲು ಸಜ್ಜಾಗಿದೆ.

ಇದು ಭಾರತದ ಅತಿದೊಡ್ಡ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಯೋಜನೆಯಾಗಿದ್ದು, ಇದನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಇದಾಗಿದೆ.

ಇದೇ ವೇಳೆ ಪ್ರಧಾನಿ ಮೋದಿ, ಅತ್ರೆ ಚೌಕ್‌ನಿಂದ ಕಫೆ ಪೆರೇಡ್‌ವರೆಗೆ ವಿಸ್ತರಿಸಿರುವ ಮುಂಬೈ ಮೆಟ್ರೋ ಲೈನ್ -3ರ ಹಂತ 2 ಬಿ ಅನ್ನು ಉದ್ಘಾಟಿಸಿದರು. ಇದನ್ನು 12,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

Comments (0)

Your email address will not be published. Required fields are marked *

Back to top button