Monday, June 23, 2025
26.6 C
Bengaluru
Google search engine
LIVE
ಮನೆರಾಜಕೀಯರಾಮನವಮಿಯಂದೇ ಪಂಬನ್​ ಬ್ರಿಡ್ಜ್​ ಉದ್ಘಾಟಿಸಿದ ಪ್ರಧಾನಿ ಮೋದಿ

ರಾಮನವಮಿಯಂದೇ ಪಂಬನ್​ ಬ್ರಿಡ್ಜ್​ ಉದ್ಘಾಟಿಸಿದ ಪ್ರಧಾನಿ ಮೋದಿ

ಚೆನ್ನೈ: ರಾಮನವಮಿಯ ದಿನದಂದೇ ಪ್ರಧಾನಿ ನರೇಂದ್ರ ಮೋದಿ ದೇಶದ ಮೊದಲ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ್ದಾರೆ. ಹೊಸ ಬ್ರಿಡ್ಜ್ ತಮಿಳುನಾಡು ಪ್ರಾವಸೋದ್ಯಮಕ್ಕೆ ಇನ್ನಷ್ಟು ವೇಗವನ್ನು ನೀಡಲಿದ್ದು, ಈ ಬ್ರಿಡ್ಜ್ ರಾಮೇಶ್ವರಂಗೆ ತೆರಳುವ ಭಕ್ತರಿಗೆ ಹಾಗೂ ಧನುಷ್ಕೋಡಿ ಪ್ರವಾಸಿಗರಿಗೆ ಹೆಚ್ಚು ಅನುಕೂಲವಾಗಲಿದೆ.

ತಮಿಳುನಾಡಿನ ಪಂಬನ್‌ನಲ್ಲಿ ನಿರ್ಮಿಸಲಾದ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನ ಪ್ರಧಾನಿ ಮೋದಿ ಭಾನುವಾರ ಉದ್ಘಾಟಿಸಿದರು. ಮಧ್ಯಾಹ್ನ 12:30 ರ ಸಮಯಕ್ಕೆ ಪಂಬನ್ ಮತ್ತು ರಾಮೇಶ್ವರಂ ನಡುವಿನ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನ ಲೋಕಾರ್ಪಣೆ ಮಾಡಿದರು‌. ಇದೇ ವೇಳೆ ಅವರು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗು ಸಂಚಾರಕ್ಕೆ ಹಸಿರು ನಿಶಾನೆ ತೋರಿದರು

ಈ ಹಳೇ ಪಂಬನ್ ರೈಲು ಸೇತುವೆಯನ್ನ 111 ವರ್ಷಗಳ ಹಿಂದೆ ಇಲ್ಲಿ ನಿರ್ಮಿಸಿದ್ದು, ಹಳೆಯ ಸೇತುವೆ ಶಿಥಿಲಗೊಂಡಿದ್ದರಿಂದ ಪಕ್ಕದಲ್ಲಿಯೇ ಹೊಸ ಸೇತುವೆ ನಿರ್ಮಿಸಲಾಗಿದೆ. ಹಳೇ ಬ್ರಿಡ್ಜ್‌ ಮಾನವ ಸಹಿತವಾಗಿ ಕಾರ್ಯನಿರ್ವಹಿಸುತ್ತಿತ್ತು. ಆದರೆ ಈ ನೂತನ ಬ್ರಿಡ್ಜ್‌ ಮಾನವ ರಹಿತವಾಗಿ ಕಾರ್ಯನಿರ್ವಹಿಸುತ್ತೆ. ಇದು ಎಲೆಕ್ಟ್ರಿಕಲ್ ಆಟೋ‌ಮೆಕ್ಯಾನಿಕಲ್ ತಂತ್ರಜ್ಞಾನ ಒಳಗೊಂಡಿದೆ. ಹಳೇ ಬ್ರಿಡ್ಜ್ ತೆರೆದುಕೊಳ್ಳಲು 45 ನಿಮಿಷ ಕಾಲಾವಕಾಶ ತೆಗೆದುಕೊಳ್ಳುತ್ತಿತ್ತು. ಆದರೆ ಹೊಸ ಬ್ರಿಡ್ಜ್ 5.3 ನಿಮಿಷದಲ್ಲಿ ತೆರೆದುಕೊಳ್ಳಲಿದೆ.

ಸುಮಾರು 2.5 ಕಿಲೋ ಮೀಟರ್​ ಉದ್ದದ ದೇಶದ ಮೊದಲ ವರ್ಟಿಕಲ್‌ ಲಿಫ್ಟ್‌ ರೈಲು ಸೇತುವೆ ಇದಾಗಿದ್ದು, ಆರ್ಥಿಕತೆ, ಪ್ರವಾಸೋದ್ಯಮ ಮತ್ತು ಯಾತ್ರಾರ್ಥಿಗಳಿಗೆ ಅನುಕೂಲವಾಗಲಿದೆ. ಮುಖ್ಯಭೂಮಿಯಿಂದ ರಾಮೇಶ್ವರಂಗೆ 5 ನಿಮಿಷದ ಪ್ರಯಾಣಿಸಬಹುದಾಗಿದೆ. ಒಟ್ಟು 535 ಕೋಟಿ ರೂಪಾಯಿ ವೆಚ್ಚದಲ್ಲಿ ಈ ವರ್ಟಿಕಲ್‌ ಲಿಫ್ಟ್‌ ಸೇತುವೆಯನ್ನ ನಿರ್ಮಾಣ ಮಾಡಲಾಗಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments