ಉಕ್ರೇನ್, ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ, ಮಂಗಳವಾರ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬುಧವಾರ ಆಸ್ಟ್ರಿಯಾಕ್ಕೆ ತೆರಳಲಿರುವ ಪ್ರಧಾನಿ, ಗುರುವಾರದವರೆಗೂ ಅಲ್ಲಿರಲಿದ್ದಾರೆ. 46 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾ ಪ್ರವಾಸ ಕೈಗೊಳ್ಳುತ್ತಿರುವುದು ಇದೇ ಮೊದಲು.
ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಈ ಭೇಟಿ ಸಹಕಾರಿಯಾಗಲಿದೆ. ಪ್ರಧಾನಿಯವರ ರಷ್ಯಾ ಭೇಟಿಯ ಬಗ್ಗೆ ಪಾಶ್ಚಾತ್ಯರು ತುಂಬಾ ಅಸೂಯೆ ಪಟ್ಟಿದ್ದಾರೆ. 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ವಿಶೇಷ ಆಹ್ವಾನದ ಮೇರೆಗೆ ಪ್ರಧಾನಿ ಇಂದು ರಷ್ಯಾಕ್ಕೆ ಭೇಟಿ ನೀಡುತ್ತಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೊರಡಿಸಿದ ಹೇಳಿಕೆಯ ಪ್ರಕಾರ, ಉಭಯ ನಾಯಕರು ಸಮಕಾಲೀನ, ಜಾಗತಿಕ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.
2019ರಲ್ಲಿ ಪ್ರಧಾನಿ ಮೋದಿ ಅವರು ರಷ್ಯಾಕ್ಕೆ ಭೇಟಿ ನೀಡಿದ್ದರು. ಪೂರ್ವ ರಷ್ಯಾದಲ್ಲಿರುವ ವ್ಲಾದಿವೋಸ್ಟೊಕ್‌ನಲ್ಲಿ ಆರ್ಥಿಕ ಸಮಾವೇಶವೊಂದರಲ್ಲಿ ಪಾಲ್ಗೊಂಡಿದ್ದರು. ಆಧುನಿಕ ಡಿಜಿಟಲ್ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಭಾರತ ಭಯೋತ್ಪಾದನೆ ಮತ್ತು ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಬದ್ಧವಾಗಿದೆ.
ಈ ಬಗ್ಗೆ ತನ್ನ ಸಹೋದರ(ಬ್ರಿಕ್ಸ್) ರಾಷ್ಟ್ರಗಳ ಸಹಕಾರದಲ್ಲಿ ಮುನ್ನಡೆಯುವುದಾಗಿ ಭಾರತದ ರಾಜತಾಂತ್ರಿಕ ನಿಯೋಗ ಬ್ರಿಕ್ಸ್ ಶೃಂಗದಲ್ಲಿ ಒತ್ತಿ ಹೇಳಿದೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com