ಬೆಂಗಳೂರು: ಕೇಂದ್ರ ಸರ್ಕಾರದ ಪರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಬೆಂಗಳೂರಿನಲ್ಲಿ ಕರ್ನಾಟಕದ ಧೀಮಂತ ನಾಯಕ, ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ ಸೇವೆ ಸಲ್ಲಿಸಿ ಸದಾ ಪ್ರೇರಣಾದಾಯಕರಾಗಿದ್ದ, ಸಜ್ಜನ ರಾಜಕಾರಣಿ ಶ್ರೀ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಶೃದ್ಧಾಂಜಲಿ ಅರ್ಪಿಸಿ, ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಜೊತೆಗೆ ಮಾನ್ಯ ಪ್ರಧಾನ ಮಂತ್ರಿಗಳು ಶ್ರೀಮತಿ ಪ್ರೇಮ ಕೃಷ್ಣರವರಿಗೆ ಕಳುಹಿಸಿದ ಶೋಕ ಸಂದೇಶವನ್ನು ಹಸ್ತಾಂತರಿಸಿದರು. ಈ ವೇಳೆ ಸಂಸದರಾಗಿರುವ ಬಸವರಾಜ ಬೊಮ್ಮಾಯಿಯವರು ಇದ್ದರು.