ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸುಮಾರು 12,850 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ತಮ್ಮ ಸರ್ಕಾರದ ಪ್ರಮುಖ ಆರೋಗ್ಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ ಅನ್ನು 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ ವಿಸ್ತರಿಸಲಿದ್ದಾರೆ.
ಸಮಾರಂಭದಲ್ಲಿ ರೋಜ್‌ಗಾರ್ ಮೇಳದ ಭಾಗವಾಗಿ ಯುವಕರಿಗೆ 51,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.ದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವುದು ಪ್ರಧಾನಿಯವರ ನಿರಂತರ ಪ್ರಯತ್ನವಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಭಾರತದ ಮೊದಲ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದದ ಎರಡನೇ ಹಂತವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆಯುಷ್ಮಾನ್ ಭಾರತ್ ಪಿಎಂ ಜನ್ ಆರೋಗ್ಯ ಯೋಜನೆಯ ವ್ಯಾಪ್ತಿಯನ್ನು 70 ವರ್ಷ ಮೇಲ್ಪಟ್ಟ ಎಲ್ಲಾ ವೃದ್ಧರಿಗೂ ವಿಸ್ತರಿಸಲಾಗುತ್ತದೆ. ಯಾವುದೇ ಸಮುದಾಯದ, ಯಾವುದೇ ಆರ್ಥಿಕ ಮಟ್ಟದ ಹಿರಿಯ ನಾಗರಿಕರಿಗೆ ಈ ಸ್ಕೀಮ್ ಲಭ್ಯ ಇರುತ್ತದೆ.
ಅಕ್ಟೋಬರ್ 29ರಂದು ಪಿಎಂ ಚಾಲನೆಗೊಳಿಸುತ್ತಿರುವ ವಿವಿಧ ಯೋಜನೆಗಳು
- ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹಲವು ಹೆಲ್ತ್ಕೇರ್ ಸಂಸ್ಥೆಗಳ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗುತ್ತದೆ.
- ಆಯುಷ್ಮಾನ್ ಭಾರತ್ ಹೆಲ್ತ್ ಇನ್ಫ್ರಾಸ್ಟ್ರಕ್ಚರ್ ಮಿಷನ್ ಅಡಿಯಲ್ಲಿ ದೇಶದ ವಿವಿಧೆಡೆ 21 ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನು ನಿರ್ಮಿಸಲಾಗುತ್ತಿದೆ. ಇದರಲ್ಲಿ ಕರ್ನಾಟಕವೂ ಒಳಗೊಂಡಿದೆ. ಇನ್ನು, ನರಸಾಪುರ ಮತ್ತು ಬೆಂಗಳೂರಿನ ಬೊಮ್ಮಸಂದ್ರದಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ನಾಳೆ ಅಡಿಗಲ್ಲು ಹಾಕಲಾಗುತ್ತಿದೆ.
-
ವೈದ್ಯಕೀಯ ಸಾಧನ ಮತ್ತು ಔಷಧಗಳ ತಯಾರಿಕೆಗೆ ಇರುವ ಪಿಎಲ್ಐ ಸ್ಕೀಮ್ ಅಡಿಯಲ್ಲಿ ಐದು ಯೋಜನೆಗಳು ನಾಳೆ ಆರಂಭವಾಗುತ್ತಿವೆ. ಇದರಲ್ಲಿ ಬೆಂಗಳೂರಿನಲ್ಲಿ ಒಂದು ಸ್ಥಾಪನೆಯಾಗುತ್ತಿದೆ.
-
ಪಿಎಂ ಅವರು ನಾಲ್ಕು ಕಡೆ ಆಯುಷ್ ಎಕ್ಸಲೆನ್ಸ್ ಸೆಂಟರ್ಗಳನ್ನು ಉದ್ಘಾಟಿಸುತ್ತಿದ್ದಾರೆ. ಬೆಂಗಳೂರಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ನಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಡಯಾಬಿಟಿಸ್ ಅಂಡ್ ಮೆಟಬಾಲಿಕ್ ಡಿಸಾರ್ಡರ್ಸ್ ಎನ್ನುವ ಕೇಂದ್ರವೂ ಇದರಲ್ಲಿ ಸೇರಿದೆ.