Wednesday, April 30, 2025
24.6 C
Bengaluru
LIVE
ಮನೆ#Exclusive NewsTop Newsಸಂಸತ್‌ ಚಳಿಗಾಲದ ಅಧಿವೇಶನ – ಜನರಿಂದ ತಿರಸ್ಕರಿಸಲ್ಪಟ್ಟವರು ಸಂಸತ್ತನ್ನು ಅಗೌರವಿಸುತ್ತಾರೆ ಕಾಂಗ್ರೆಸ್​​​ಗೆ : ಮೋದಿ ವಾಗ್ದಾಳಿ

ಸಂಸತ್‌ ಚಳಿಗಾಲದ ಅಧಿವೇಶನ – ಜನರಿಂದ ತಿರಸ್ಕರಿಸಲ್ಪಟ್ಟವರು ಸಂಸತ್ತನ್ನು ಅಗೌರವಿಸುತ್ತಾರೆ ಕಾಂಗ್ರೆಸ್​​​ಗೆ : ಮೋದಿ ವಾಗ್ದಾಳಿ

ನವದೆಹಲಿ: ಜನರಿಂದ ಪದೇ ಪದೇ ತಿರಸ್ಕರಿಸಲ್ಪಟ್ಟವರು ಸಂಸತ್ತು ಹಾಗೂ ಪ್ರಜಾಪ್ರಭುತ್ವವನ್ನು ಅಗೌರವಿಸುತ್ತಾರೆ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ ಸುಗಮ ಕಲಾಪಕ್ಕೆ ವಿಪಕ್ಷಗಳಿಗೆ ಮನವಿ ಮಾಡಿದರು.

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿದ್ದು, ಎನ್‌ಡಿಎ ಮೈತ್ರಿಕೂಟ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ನಡುವೆ ಭಾರೀ ವಾಕ್ಸಮರಕ್ಕೆ ವೇದಿಕೆಯಾಗುವ ಎಲ್ಲಾ ಸಾಧ್ಯತೆಗಳಿವೆ. ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಆರೋಗ್ಯಕರ ಚರ್ಚೆಗಳಿಗೆ ಮನವಿ ಮಾಡಿದರು.

ಕಾಂಗ್ರೆಸ್‌ ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದೇ ಕಡಿಮೆ. ಪದೇ ಪದೇ ಜನರಿಂದ ತಿರಸ್ಕಾರಗೊಂಡವರು ಗೂಂಡಾಗಿರಿ ಮೂಲಕ ಸಂಸತ್ತಿನ ಮೇಲೆ ಹಿಡಿತ ಸಾಧಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಅಧಿವೇಶನದಲ್ಲಿ ಎಲ್ಲಾ ವಿಚಾರಗಳ ಕುರಿತು ಚರ್ಚೆಗೆ ಅವಕಾಶ ಮಾಡಿಕೊಡಲಾಗುತ್ತದೆ. ಜನರ ಸಮಸ್ಯೆಗಳ ಪ್ರಾಮಾಣಿಕ ಚರ್ಚೆ ನಡೆಸಬೇಕಿದೆ. ಹೀಗಾಗಿ, ಎಲ್ಲರೂ ಕಲಾಪದಲ್ಲಿ ಭಾಗಿಯಾಗಬೇಕು, ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಬೇಕೆಂದು ಹೇಳಿದರು.

2024 ವರ್ಷದ ಕೊನೆಯ ದಿನಗಳು ನಡೆಯುತ್ತಿದ್ದು, ದೇಶವು 2025ರ ನೂತನ ವರ್ಷಕ್ಕೆ ತಯಾರಿ ನಡೆಸುತ್ತಿದೆ. ಸಂಸತ್ತಿನ ಈ ಅಧಿವೇಶನವು ಹಲವಾರು ವಿಧಗಳಲ್ಲಿ ವಿಶೇಷವಾಗಿದೆ. ಅತ್ಯಂತ ಮುಖ್ಯ ವಿಷಯವೆಂದರೆ ಸಂವಿಧಾನದ 75ನೇ ವರ್ಷದ ಆರಂಭ. ನಾಳೆ, ಸಂವಿಧಾನ ದಿನ. ಎಲ್ಲರೂ ಸಂವಿಧಾನದ 75 ನೇ ವರ್ಷವನ್ನು ಆಚರಿಸುತ್ತಾರೆ. 75ನೇ ವರ್ಷದ ಸಂವಿಧಾನದ ದಿನದ ಸಂದರ್ಭದಲ್ಲಿ ಅಧಿವೇಶನ ನಡೆಯುತ್ತಿದ್ದು, ಈ ಅಧಿವೇಶನದ ಕಲಾಪ ಸುಗಮವಾಗಿ ಸಾಗಲು ವಿರೋಧ ಪಕ್ಷಗಳು ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.

ಸಂಸತ್ತು ಮತ್ತು ನಮ್ಮ ಸಂಸದರು ನಮ್ಮ ಸಂವಿಧಾನದ ಪ್ರಮುಖ ಭಾಗಗಳು. ಸಂಸತ್ತಿನಲ್ಲಿ ಆರೋಗ್ಯಕರ ಚರ್ಚೆಗಳು ನಡೆಯಬೇಕು ಮತ್ತು ಹೆಚ್ಚು ಹೆಚ್ಚು ಜನರು ಚರ್ಚೆಗಳಲ್ಲಿ ಪಾಲ್ಗೊಳ್ಳಬೇಕು. ಸಂಸತ್ತಿನಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಆದ್ರೆ ಕೆಲವರು ತಮ್ಮ ರಾಜಕೀಯ ಲಾಭಕ್ಕಾಗಿ ಬೆರಳೆಣಿಕೆಯ ಜನರ ನಡುವೆ ಗೂಂಡಾಗಿರಿ ಸೃಷ್ಟಿಸುವ ಮೂಲಕ ಸಂಸತ್ತನ್ನು ನಿಯಂತ್ರಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಕುಟುಕಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments