ರಾಜಕೀಯಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ – ಇಂದು ಸಿಐಡಿ ವಿಚಾರಣೆಗೆ ಬಿಎಸ್‌ವೈ ಹಾಜರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಪೋಕ್ಸೊ ಕೇಸ್  ತನಿಖೆ ಎದುರಿಸಲು ಇಂದು ಸಿಐಡಿಗೆ  ವಿಚಾರಣೆಗೆ ಹಾಜರಾಗಲಿದ್ದಾರೆ. ಬರೋಬ್ಬರಿ ಮೂರು ತಿಂಗಳ ಬಳಿಕ ವಿಚಾರಣೆ ಎದುರಿಸಲು ಬಿಎಸ್ ಯಡಿಯೂರಪ್ಪ ಸಿಐಡಿ ಕಚೇರಿಗೆ ತನಿಖೆಗೆ ಹಾಜರಾಗುತ್ತಿದ್ದಾರೆ.

ಮಾರ್ಚ್ 14 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಪ್ರಕಣದ ಹೆಚ್ಚಿನ ತನಿಖೆಗೆ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಮಾಡಿತ್ತು. ಇದಾದ ಬಳಿಕ ಸಿಐಡಿ ಬಿಎಸ್‌ವೈ ಅವರನ್ನು ಕರೆದು ವಾಯ್ಸ್ ಸ್ಯಾಂಪಲ್ ಪಡೆದು ತನಿಖಾಧಿಕಾರಿಗಳು ಅವರನ್ನು ಕಳುಹಿಸಿಕೊಟ್ಟಿದ್ದಾರೆ.

ಹೆಚ್ಚಿನ ವಿಚಾರಣೆಗೆ ಬಿಎಸ್‌ವೈಗೆ ಸಿಐಡಿ ನೋಟಿಸ್ ನೀಡಿತ್ತು. ಬಿಎಸ್‌ವೈ ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೇಳಿದ್ದರಿಂದ ಸಿಐಡಿ ವಾರೆಂಟ್ ಜಾರಿ ಮಾಡಿ ಬಂಧನಕ್ಕೆ ಮುಂದಾಗಿತ್ತು. ಈ ವೇಳೆ ಕೋರ್ಟ್ ಬಂಧಿಸದಂತೆ ತಡೆ ನೀಡಿ ಇಂದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದರಿಂದ ಸಿಐಡಿ ಮುಂದೆ ಬಿಎಸ್‌ವೈ ಇಂದು ತನಿಖೆಗೆ ಹಾಜರಾಗಲಿದ್ದಾರೆ. ತನಿಖಾಧಿಕಾರಿ ಪೃಥ್ವಿ ಎದರು ಬಿಎಸ್ ಯಡಿಯೂರಪ್ಪ ತನಿಖೆಗೆ ಹಾಜರಾಗಲಿದ್ದಾರೆ.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Comments (0)

Your email address will not be published. Required fields are marked *

Back to top button