#Exclusive NewsTop Newsರಾಜ್ಯಸುದ್ದಿ
ಸುವರ್ಣ ಸೌಧದಲ್ಲೇ ಸಿಟಿ ರವಿಯನ್ನು ಬಂಧಿಸಿದ ಪೊಲೀಸರು

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿರುವ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿದ್ದಾರೆ.




