ರಾಮನಗರ : ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್‌ಟೇಬಲ್ ಶವ ಪತ್ತೆಯಾಗಿದೆ. ಮಂಜುಶ್ರೀ (27) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
2020-21ರಿಂದ ಪೊಲೀಸ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಮಂಜುಶ್ರೀ ಬೆಂಗಳೂರಿನ ಮೈಕೋ ಲೇಔಟ್ನಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಶಿವಾಜಿನಗರಕ್ಕೆ ನಿಯೋಜನೆ ಆಗಿದ್ದರು.
ಕೆಲ ದಿನಗಳಿಂದ ಕೆಲಸಕ್ಕೆ ರಜೆ ಹಾಕಿದ್ದ ಮಂಜುಶ್ರೀ ನಿನ್ನೆ ರಾತ್ರಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮರಣೋತ್ತರ ಪರೀಕ್ಷೆಗೆ ಶವ ರವಾನಿಸಲಾಗಿದೆ. ಹಾರೋಹಳ್ಳಿಯ ದಯಾನಂದ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
ರಾಮನಗರದ ದ್ಯಾವಸಂದ್ರದಿಂದ ಬೆಂಗಳೂರಿಗೆ ಬಂದು ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಂಜುಶ್ರೀ ಅವರು ಕಳೆದ ಕೆಲ ದಿನಗಳಿಂದ ಕೆಲಸಕ್ಕೆ ಹಾಜರಾಗಿರಲಿಲ್ಲ. ರಜೆ ಹಾಕಿದ್ದರು. ಆದರೆ ಈಗ ಅವರ ಶವ ಮನೆಯಲ್ಲಿ ಪತ್ತೆಯಾಗಿದೆ. ದ್ಯಾವಸಂದ್ರದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.