ರಾಜಕೀಯರಾಜ್ಯಸಿನಿಮಾಸುದ್ದಿ

ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ – ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 27: ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಜನರನ್ನು ಅಮಾನತು ಮಾಡಲಾಗಿದೆ. ಪ್ರಕರಣಕ್ಕೆಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದು, ವರದಿ ಆಧಾರದ ಮೇಲೆ ತಪ್ಪೆಸಗಿರುವ ಇನ್ನಷ್ಟು ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದರು.

Comments (0)

Your email address will not be published. Required fields are marked *

Back to top button